ಪಿಡಿಒ ಲೀಲಾವತಿ ಮಾತನಾಡಿ, ರಸ್ತೆ ಅತಿಕ್ರಮಣ ಮಾಡಿಕೊಂಡು, ಕಲ್ಲುಗಳನ್ನು ಅಡ್ಡ ಇಟ್ಟಿರುವುದು ಕಾನೂನು ಬಾಹಿರವಾಗಿದೆ. ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಕಲ್ಲುಗಳನ್ನು ತೆರವುಗೊಳಿಸದಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.