ಸಂಡೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ ಮಾರಾಟಗಾರರು ಮತ್ತು ರೈತರ ಸಭೆ ನಡೆಯಿತು. ಹಸಿರು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಪಾದಸ್ವಾಮಿ, ತಾಲೂಕು ಅಧ್ಯಕ್ಷ ಧರ್ಮಾನಾಯ್ಕ, ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಮೇಟಿ, ಷಣ್ಮುಖಪ್ಪ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ತಹಸೀಲ್ದಾರ್ ಅನಿಲ್ ಕುಮಾರ್ ಎಚ್ಚರಿಕೆ
ಸಂಡೂರು ಕೃಷಿ ಪರಿಕರ ಮಾರಾಟಗಾರರ ಸಭೆ
ಸಂಡೂರು: ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ ವಹಿಸುವುದಾಗಿ ತಹಸೀಲ್ದಾರ್ ಅನಿಲ್ ಕುಮಾರ್ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ ಮಾರಾಟಗಾರರು ಮತ್ತು ರೈತರ ಸಭೆಯಲ್ಲಿ ಮಾತನಾಡಿದರು. ಎಲ್ಲ ಮಾರಾಟ ಮಳಿಗೆಗಳಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಬಾರದು. ಎಫ್‌ಐಡಿ ಇಲ್ಲದ ರೈತರಿಗೆ ಸಂಬಂಧಿಸಿದಂತೆ ಡಿಸಿ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಭಾರ ಎಡಿಎ ಮೊಹಮ್ಮದ್ ರಫಿವುಲ್ಲಾ ರಜ್ವಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೆ ಮಳೆಯ ಪ್ರಮಾಣ ಅತಿ ಕಡಿಮೆಯಾಗಿದೆ. ರೈತರು ಯೂರಿಯಾ ಗೊಬ್ಬರವನ್ನಷ್ಟೇ ಬಳಕೆ ಮಾಡದೆ ಕಾಂಪ್ಲೆಕ್ಸ್, ಡಿಎಪಿ ಸೇರಿದಂತೆ ಇತರ ರಸಗೊಬ್ಬರಗಳನ್ನು ಬಳಕೆ ಮಾಡಬೇಕು. ನಿತ್ಯ ರಸಗೊಬ್ಬರ ಮಾರಾಟದ ಅಂಕಿ ಅಂಶಗಳನ್ನು ಇಲಾಖೆಗೆ ಪರಿಕರ ಮಾರಾಟಗಾರರು ಒದಗಿಸಬೇಕು ಎಂದರು.
ಹಸಿರು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಪಾದಸ್ವಾಮಿ ಮಾತನಾಡಿ, ಎಲ್ಲ ಅಂಗಡಿಗಳಲ್ಲಿ ಒಂದು ಚೀಲ ಯೂರಿಯಾಗೆ 330 ರಿಂದ 350 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಒಂದೆರೆಡು ಅಂಗಡಿಗಳಲ್ಲಿ 600 ರೂ.ಗೆ ಮಾರುತ್ತಿದ್ದಾರೆ. 350 ರೂ. ಬಿಲ್ ನೀಡುತ್ತಿದ್ದಾರೆ ಎಂದು ದೂರಿದರು.