ಜೀವನದಲ್ಲಿ ಶಿಸ್ತು-ಸ್ವಚ್ಛತೆ ಅಳವಡಿಸಿಕೊಳ್ಳಿ

ಕಂಪ್ಲಿಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಸಾಧಕಿಯರನ್ನು ಗೌರವಿಸಲಾಯಿತು.
ಕಂಪ್ಲಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಸಾಧಕಿಯರನ್ನು ಗೌರವಿಸಲಾಯಿತು.
Published on
ಕಂಪ್ಲಿ: ಬದುಕು ಕಟ್ಟಿಕೊಳ್ಳಲು ಸದಾ ಕ್ರಿಯಾಶೀಲವಾಗಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು.
ಪಟ್ಟಣದ ವೀರಶೈವ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಗೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಶಿಕ್ಷಣ, ಆರೋಗ್ಯ, ಪರಿಸರ, ನೀರಿನ ಮೂಲಗಳ ಸ್ವಚ್ಛತೆ, ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯ ಕಾಪಾಡುವುದರೊಂದಿಗೆ ನಾನಾ ಯೋಜನೆಗಳನ್ನು ಟ್ರಸ್ಟ್ ಮೂಲಕ ರಾಜ್ಯದ ಜನರಿಗೆ ಒದಗಿಸಲಾಗುತ್ತಿದೆ. ಸ್ವಸಹಾಯ ಸಂಘಗಳ ಸದಸ್ಯೆಯರು ನಿತ್ಯ ಜೀವನದಲ್ಲಿ ಶಿಸ್ತು, ಶಿಕ್ಷಣ, ಸ್ವಚ್ಛತೆ ಅಳವಡಿಸಿಕೊಂಡಲ್ಲಿ ಆದರ್ಶಪೂರ್ಣ ಜೀವನ ಸಾಗಿಸಲು ಸಾಧ್ಯ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ, ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಅವರು ಮಹಿಳೆ ಮತ್ತು ಮಕ್ಕಳ ಕಾನೂನು, ಸರ್ಕಾರಿ ಸೌಲಭ್ಯಗಳು ಕುರಿತು ಮಾಹಿತಿ ನೀಡಿದರು. ಶಿವಾನಿ ಮಹಿಳಾ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ನಿರ್ಮಲಾ ಅಧ್ಯಕ್ಷತೆ ವಹಿಸಿದ್ದರು.
ಟ್ರಸ್ಟ್ ಜಿಲ್ಲಾ ನಿರ್ದೇಶಕ ರೋಹಿತಾಕ್ಷ, ಯೋಜನಾಧಿಕಾರಿ ಎಲ್.ರಾಘವೇಂದ್ರ, ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ.ಶಾರದಾ ಜ.ಹಿರೇಮಠ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎ.ವಾಗೀಶ್, ಎನ್.ರಾಮಾಂಜಿನೇಯಲು, ಉಮಾಮಹೇಶ್ವರಿ, ಪಿಎಸ್‌ಐ ಅವಿನಾಶ ಕಾಂಬ್ಳೆ, ಎಎಸ್‌ಐ ಬವಸವರಾಜ, ಪಿಸಿ ಶೃತಿ, ಡಾ.ವೆಂಕಟೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net