ಪಟ್ಟಣದ 21ನೇ ವಾರ್ಡ್‌ನಲ್ಲಿ ಸವೇ ನಂ 332ಬಿ/5, 325/ಡಿ/2, 331ಎ/1, 332ಎ/5 ಸ್ಥಳದಲ್ಲಿ ಈಗಾಗಲೇ ನಿರ್ಮಿಸಿರುವ ನೆಲಮಹಡಿ ಹಾಗೂ ಮೊದಲನೇ ವಾಣಿಜ್ಯ ಮಳಿಗೆ ಕಟ್ಟಡಕ್ಕೆ ಕಾನೂನು ಬಾಹಿರವಾಗಿ ಹೊಸದಾಗಿ ಕಟ್ಟಡ ಪರವಾನಿಗೆ ಕೊಟ್ಟಿರುವುದನ್ನು ರದ್ದುಪಡಿಸಬೇಕು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿರುವ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಕೊಡದೇ ಲಂಚದ ಅಮಿಷ ತೋರಿಸಿ ಕಾನೂನು ಬಾಹಿರವಾಗಿ ವಾಣಿಜ್ಯ ಮಳಿಗೆ ಕಟ್ಟಡ ಪರವಾನಿಗೆ ಪಡೆದಿರುವ ಭೂ ಮಾಲೀಕ ವಿ.ಕುಮಾರಸ್ವಾಮಿ ಎಂಬುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು. ಆರೋಪಿಸಿರುವ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆಗೊಳಿಸಿದರು.