ಬಾಡಿಗೆ ಕಟ್ಟಡದಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಗಳಿದ್ದು, ಒಂದು ತರಗತಿಗೆ ತಲಾ 50ರಂತೆ ಒಟ್ಟು 250 ವಿದ್ಯಾರ್ಥಿಗಳಿದ್ದಾರೆ. ಕಾನಹೊಸಹಳ್ಳಿ ಸಮೀಪದ ಇಮಡಾಪುರ ಬಳಿ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಶೇ.90 ಕಾಮಗಾರಿ ಮುಗಿದಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಕಾಮಗಾರಿ 2023ರ ಮಾರ್ಚ್‌ಗೆ ಮುಗಿಯಬೇಕಿತ್ತು. ನಾನಾ ಕಾರಣದಿಂದ ವಿಳಂಬವಾಗಿದೆ. ಆದರೂ, ಇದರಿಂದಾಗಿ ವಿದ್ಯಾರ್ಥಿಗಳನ್ನು ಬಾಡಿಗೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಕುರಿತು ಯಾವುದೇ ನಿರ್ಧಾರ ಇನ್ನೂ ಕೈಗೊಂಡಿಲ್ಲ.