ರೈತ ವಿರೋಧಿ ಕಾನೂನು ಹಿಂಪಡೆಯಲಿ

ಕುರುಗೋಡು ತಹಸೀಲ್ದಾರ್ ನರಸಪ್ಪಗೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು. ಅಧ್ಯಕ್ಷ ಯು.ಬಸವರಾಜ, ಜಿಲ್ಲಾ ಅಧ್ಯಕ್ಷ ಗಾಳಿ ಬಸವರಾಜ, ತಾಲೂಕು ಅಧ್ಯಕ್ಷ ಮೇಟಿ ಕಲ್ಗುಡೆಪ್ಪ, ಶಿವಶಂಕರ ಇದ್ದರು.
ಕುರುಗೋಡು ತಹಸೀಲ್ದಾರ್ ನರಸಪ್ಪಗೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು. ಅಧ್ಯಕ್ಷ ಯು.ಬಸವರಾಜ, ಜಿಲ್ಲಾ ಅಧ್ಯಕ್ಷ ಗಾಳಿ ಬಸವರಾಜ, ತಾಲೂಕು ಅಧ್ಯಕ್ಷ ಮೇಟಿ ಕಲ್ಗುಡೆಪ್ಪ, ಶಿವಶಂಕರ ಇದ್ದರು.
Published on
ಕುರುಗೋಡು: ಅಮೆರಿಕದೊಂದಿಗೆ ಕೃಷಿ ವಲಯಕ್ಕೆ ಸಂಬಂಧಿಸಿದ ಮುಕ್ತ ವ್ಯಾಪಾರ ಒಪ್ಪಂದ ರದ್ದುಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತಸಂಘ ರಾಷ್ಟ್ರಪತಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನರಸಪ್ಪಗೆ ಬುಧವಾರ ಸಲ್ಲಿಸಲಯಿತು.
ಅಧ್ಯಕ್ಷ ಯು.ಬಸವರಾಜ ಮಾತನಾಡಿ, ಕಾರ್ಪೋರೇಟ್ ಸಂಸ್ಥೆಗಳ ಕೈ ಬಲಪಡಿಸುವ ಉದ್ದೇಶದಿಂದ ಅಮೆರಿಕದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ದೇಶದಲ್ಲಿ ಕೃಷಿ ಬಿಕ್ಕಟ್ಟು ತೀವ್ರಗೊಳ್ಳಲಿದೆ. ಸಾಮ್ರಾಜ್ಯ ಶಾಹಿಪರ ಕಾರ್ಯಸೂಚಿಗಳನ್ನು ಕೈಬಿಡಬೇಕು.
ರೈತವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಬೆಂಬಲಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net