ಬಳ್ಳಾರಿಯ ಡಿಎಚ್‌ಒ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಡಿಎಚ್‌ಒ ಡಾ.ವೈ.ರಮೇಶಬಾಬು ಸಸಿ ನೆಟ್ಟರು. ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ, ಡಾ.ವೀರೇಂದ್ರ ಕುಮಾರ್, ಡಾ.ನರಸಿಂಹ ಮೂರ್ತಿ, ಡಾ.ಭಾರತಿ ಇತರರಿದ್ದರು. ===
ಬಳ್ಳಾರಿ : ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಿ, ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿ, ಮರುಬಳಕೆ ಮಾಡಲು ಸಾರ್ವಜನಿಕರು ಪ್ರೇರೇಪಿತರಾಗಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ನಗರದ ಡಿಎಚ್‌ಒ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶನಿವಾರ ಸಸಿ ನೆಟ್ಟು ಮಾತನಾಡಿದರು. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಬಹುದು. ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಭೂಮಿಯನ್ನು ಕೊಡುಗೆಯಾಗಿ ನೀಡಲು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಅರಣ್ಯವಿಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ಬೆಳೆಯಿಲ್ಲ ಎಂದು ಸಲಹೆ ನೀಡಿದರು.
ಪರಿಸರ ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ನಾಶದಂತಹ ಗಂಭೀರ ಸಮಸ್ಯೆಗಳ ವಿರುದ್ಧ ಹೋರಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಕಾಡಿನ ಹಸಿರು ನಮ್ಮೆಲ್ಲರ ಉಸಿರಾಗಿದ್ದು, ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನವನ್ನು ಇಳಿಸಬೇಕು ಎಂದು ಕರೆ ನೀಡಿದರು.