ಕಂಪ್ಲಿ: ದೇಶದ ಆಹಾರ ಸ್ವಾವಲಂಬನೆಯಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಚಿಂತನೆಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ಕೆ.ವಿರೂಪಾಕ್ಷಪ್ಪ ಹೇಳಿದರು.
ತಹಸಿಲ್ ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನರಾಮ್ ಜಯಂತ್ಯುತ್ಸವದಲ್ಲಿ ಭಾನುವಾರ ಮಾತನಾಡಿದರು. ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಲು ಹಸಿರು ಕ್ರಾಂತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕೀರ್ತಿ ಬಾಬುಜಗಜೀವನರಾಮ್ ಅವರಿಗೆ ಸಲ್ಲುತ್ತದೆ. ಶೋಷಿತ ಸಮುದಾಯದವರನ್ನು ಜಾಗೃತಿಗೊಳಿಸುವ ಮೂಲಕ ಮುಖ್ಯವಾಹಿನಿಗೆ ಕರೆತರುವಲ್ಲಿ ಅವರ ಕಾರ್ಯ ಆದರ್ಶವಾಗಿದೆ ಎಂದರು.
ಇಸಿಒ ಟಿ.ಎಂ.ಬಸವರಾಜ, ನಿಲಯ ಪಾಲಕಿ ಎಂ.ಬಿ.ಶುಭಾ, ತಾಲೂಕು ಕಚೇರಿ ಸಿಬ್ಬಂದಿ ಮಾಲತೇಶ ದೇಶಪಾಂಡೆ, ಲಕ್ಷ್ಮಣನಾಯ್ಕ, ನೀಲಕಂಠ, ಪಂಪಾಪತಿ ಇತರರಿದ್ದರು.