ಸ್ಥಳೀಯ ಸಂಸ್ಥೆಗಳ ಅರಿವು ಅಗತ್ಯ

ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ರಾಮಕೃಷ್ಣ ಉದ್ಘಾಟಿಸಿದರು. ಡಿಡಿಪಿಐ ಬಿ.ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ,  ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಇದ್ದರು. ======
ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ರಾಮಕೃಷ್ಣ ಉದ್ಘಾಟಿಸಿದರು. ಡಿಡಿಪಿಐ ಬಿ.ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಇದ್ದರು. ======
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜ
  • ಸ್ಥಳೀಯ
  • ಸಾಗಾಣಿಕೆ
  • ಸಿಬ್ಬಂದಿ
ಬಳ್ಳಾರಿ : ಸಮಾಜದ ಪ್ರತಿಯೊಬ್ಬರಿಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಎಲ್ಲ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ರಾಮಕೃಷ್ಣ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಐಟಿಪಿಎ, 1956ರ ಕಾಯ್ದೆ ಕುರಿತು ಜಿಲ್ಲಾಮಟ್ಟದ ನಾನಾ ಸಹಭಾಗಿದಾರರ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಬಹುದಾಗಿದೆ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಡಿಡಿಪಿಐ ಬಿ.ಉಮಾದೇವಿ ಮಾತನಾಡಿ, ಪ್ರಸ್ತುತ ಶಾಲೆಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಅವಶ್ಯಕವಾಗಿದೆ. ಮಕ್ಕಳಿಗೆ ಶಾಲೆಯೇ ಸುರಕ್ಷಿತ ಸ್ಥಳವಾಗಿದ್ದು, 7 ದಿನಕ್ಕಿಂತ ಹೆಚ್ಚು ಗೈರಾದಲ್ಲಿ ಅಂತಹ ಮಕ್ಕಳ ಪೋಷಕರನ್ನು ಸಂಪರ್ಕಿಸಿ ಮರಳಿ ಶಾಲೆಗೆ ಕರೆತರಬೇಕು. ಅದರಲ್ಲೂ ಪ್ರೌಢಶಾಲೆಯ ಹೆಣ್ಣುಮಕ್ಕಳ ಮೇಲೆ ನಿರಂತರ ನಿಗಾವಹಿಸಬೇಕು. ಗೈರಾದಲ್ಲಿ ಮಾಹಿತಿ ಸಂಗ್ರಹಿಸಬೇಕು. ಸಹಭಾಗೀದಾರರ ಇಲಾಖೆಗಳ ಅಧಿಕಾರಿಗಳು ಸಹ ಇದಕ್ಕೆ ಕೈಜೋಡಿಸಬೇಕಿದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ ಮಾತನಾಡಿ, ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಈ ಜಾಲಕ್ಕೆ ಬೇಗನೇ ಜಾರುತ್ತಾರೆ. ಜೀತ ಕಾರ್ಮಿಕ ಪದ್ಧತಿ, ಅಂಗಾಂಗ ಕಸಿ, ಹೊರ ದೇಶಗಳಿಗೆ ಮಾರಾಟ, ಭಿಕ್ಷಾಟನೆ ಸೇರಿದಂತೆ ಹಲವಾರು ಅನಧೀಕೃತ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತದೆ. ಇದಕ್ಕೆ ಕಡಿವಾಣ ಹಾಕಲು ಗ್ರಾಪಂ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳನ್ನೊಳಗೊಂಡ ಸಮಿತಿಗಳಿದ್ದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಅತ್ಯಾವಶ್ಯಕವಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net