ಸ್ವಾವಲಂಬನೆ ಜೀವನಕ್ಕೆ ಬ್ಯಾಂಕ್ ಸಹಕಾರಿ

ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್,  ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಬೆಂಗಳೂರಿನ ಆರ್‌ಬಿಐ ಬ್ಯಾಂಕಿನ ಎಜಿಎಂ ಆರ್.ಪ್ರಭಾಕರ್, ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪ ಅರುಣ್ ಕುಮಾರ್ ಎ.ಜೆ.,  ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ವಿ.ಕುಲಕರ್ಣಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸ್ವಾವಲಂಬನೆ
ಬಳ್ಳಾರಿ : ಬ್ಯಾಂಕ್‌ಗಳಿಗೆ ಜನರು ನೆರವಿಗಾಗಿ ಸಲ್ಲಿಸುವ ಲೋನ್ ಅರ್ಜಿಗಳನ್ನು ಸಕಾಲದಲ್ಲಿ ಇತ್ಯರ್ಥಗೊಳಿಸುವ ಮೂಲಕ ಬಡಜನರ ಕಣ್ಣೊರೆಸುವ ಕೆಲಸ ಮಾಡಬೇಕು ಎಂದು ಸಂಸದ ಈ.ತುಕಾರಾಮ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಲೀಡ್ ಬ್ಯಾಂಕ್‌ನ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು. ಸರ್ಕಾರದಿಂದ ಜಾರಿಗೊಂಡಿರುವ ನಾನಾ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯ ಬ್ಯಾಂಕ್‌ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.
ಸರ್ಕಾರಿ ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಇದರಿಂದ ಸರ್ಕಾರದ ಯೋಜನೆಗಳು ಸಫಲತೆ ಕಾಣುತ್ತಿಲ್ಲ. ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವಾರ್ಷಿಕ ಸಾಲ ಯೋಜನೆಯಡಿ ಮಾರ್ಚ್ ಅಂತ್ಯದೊಳಗೆ ಕೃಷಿ, ಶಿಕ್ಷಣ, ವಸತಿ, ಕೈಗಾರಿಕೆ, ಸಾಮಾಜಿಕ ಬೆಳವಣಿಗೆ ಸೇರಿದಂತೆ ಆದ್ಯತಾ ವಲಯಕ್ಕೆ ಮಂಜೂರು ಮಾಡಿರುವ ಅನುದಾನ ನಿಗದಿತ ಕಾಲಾವಧಿಯೊಳಗೆ ಗುರಿ ತಲುಪಬೇಕು ಎಂದರು.
ಇದೇ ವೇಳೆ ಉದ್ಯೊಗಿನಿ, ಪಿಎಂಇಜಿಪಿ, ಪಿಎಂ ಸ್ವನಿಧಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಭೆಗೂ ಮುನ್ನ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಿಮೆ ಹೊಂದಿದ್ದ ಇಬ್ಬರು ವಿಮಾದಾರರ ನಾಮನಿರ್ದೇಶಿತರಿಗೆ ತಲಾ 2 ಲಕ್ಷ ರೂ. ಮೌಲ್ಯದ 2 ಚೆಕ್‌ಗಳನ್ನು ಹಸ್ತಾಂತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net