ಬಳ್ಳಾರಿ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ, ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜ್ ಅವರನ್ನು ಚುನಾವಣಾ ಪ್ರಚಾರದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಬೆಣಕಲ್ ಬಸವರಾಜ್ ಅವರ ಸಂಘಟನಾ ಚತುರತೆ ಗುರುತಿಸಿ ಕೆಪಿಸಿಸಿ ಜವಾಬ್ದಾರಿ ನೀಡಿದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಾ ಬಂದಿರುವ ಹೊಣೆಗಾರಿಕೆ ಒಲಿದು ಬಂದಿದೆ.
ಕೋಟ್.. ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಗೆಲುವಿಗಾಗಿ ಶಕ್ತಿಮೀರಿ ಶ್ರಮಿಸುವೆ.