ಪಟ್ಟಣದ ತಾಪಂ ರಾಜೀವಗಾಂಧಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಬರ ನಿರ್ವಹಣೆ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಸೋರಿಕೆ, ಕೊಳವೆ ಬಾವಿ, ಜಲ ಸಂಗ್ರಹಗಾರಗಳ ದುರಸ್ತಿ ಕಾರ್ಯ ಸೇರಿ ಇನ್ನು ಅನೇಕ ಸಮಸ್ಯೆಗಳಿದ್ದು ಅಧಿಕಾರಿಗಳು ಅವುಗಳಲ್ಲಿನ ದೋಷಗಳನ್ನು ಸರಿಪಡಿಸಬೇಕು. ಕೊನೆ ಹಂತದಲ್ಲಿ ಅಧಿಕಾರಿಗಳು ತಾಂತ್ರಿಕ ದೋಷದ ನೆಪ ಏಳಿ ಜಾರಿಕೊಳ್ಳಬಾರದು.