ಸಿರಿಗೇರಿ: ಗ್ರಾಮದ ಸರ್ಕಾರಿ ಮಾದರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ಪಾಲಕರ ಸಭೆ ಮತ್ತು ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಎನ್.ಶ್ರೀರಾಮ, ಉಪಾಧ್ಯಕ್ಷೆ ಸಾವಿತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಕಾಳಿ, ಶರತ್, ಚಿರಂಜೀವಿ ಸಂವಿಧಾನ ಪೀಠಿಕೆ ಓದಿದರು. ಪ್ರಭಾರ ಮುಖ್ಯಶಿಕ್ಷಕ ಶಿವಕುಮಾರ ಬಿ.ಆರ್. ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರ ಜೀವನ ಚರಿತ್ರೆ, ಶಿಕ್ಷಣಕ್ಕಾಗಿ ನಡೆಸಿದ ಹೋರಾಟ, ಆಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ವಿದ್ಯೆ ಕೊಡಿಸುವ ಸಲುವಾಗಿ ಪಟ್ಟ ಶ್ರಮದ ಮಾಹಿತಿ ನೀಡಿದರು. ಹೆಣ್ಣು ಮಕ್ಕಳು ಹೆಚ್ಚು ವಿದ್ಯಾವಂತರಾಗಿ ಕೀರ್ತಿ ತರುವ ಕೆಲಸ ಮಾಡಬೇಕೆಂದು ತಿಳಿಸಿದರು.