ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ಸಬಲರಾಗಿ

ಕಂಪ್ಲಿ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಚಾಲನೆ ನೀಡಿದರು.
ಕಂಪ್ಲಿ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಚಾಲನೆ ನೀಡಿದರು.
Published on
ಕಂಪ್ಲಿ: ಮಹಿಳೆಯರು ಲಭ್ಯ ಅವಕಾಶಗಳನ್ನು ಬಳಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಮುನ್ನುಗ್ಗಿ ಸಮಾನತೆ ಸಾಧಿಸಬೇಕಿದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಹೇಳಿದರು.
ಮಹಿಳಾ ದಿನಾಚರಣೆ ನಿಮಿತ್ತ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾನುವಾರ ಮಾತನಾಡಿದರು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.
ತಾಪಂ ಇಒ ಆರ್.ಕೆ.ಶ್ರೀಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಶಿಕ್ಷಣ, ಹುದ್ದೆ ಗಳಿಸುವಲ್ಲಿ ಮಹಿಳೆಯರು ಮುಂದಾಗಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಮಹಿಳೆಯರು ಪಾತ್ರ ಪ್ರಮುಖವಾಗಿದೆ ಎಂದರು.
ಅಂಗನವಾಡಿ ಮೇಲ್ವಿಚಾರಕಿಯರಾದ ಲತೀಫಾ ಬೇಗಂ, ಎಮ್ಮಿಗನೂರಿನ ಎರ‌್ರೆಮ್ಮ ಇತರರು ಮಾತನಾಡಿ, ಅಸಂಘಟಿತ ಕಾರ್ಮಿಕ ವಲಯದಲ್ಲಿ ವೇತನ ತಾರತಮ್ಯವಿದ್ದು, ಮಹಿಳೆಯರಿಗೂ ಪುರುಷರಷ್ಟೇ ಸಮಾನ ವೇತನ ದೊರೆಯಬೇಕಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಸಿ.ವಿಜಯಲಕ್ಷ್ಮೀ, ರೇಣುಕಮ್ಮ, ಎಂ.ರಾಜಭಕ್ಷಿ, ಅಧಿಕಾರಿಗಳಾದ ಕೆ.ಎಸ್.ಮಲ್ಲನಗೌಡ, ಶ್ರೀಶೈಲ ರೂಗಿ, ಜೆಸ್ಕಾಂ ಬಸಪ್ಪ, ದೇವರೆಡ್ಡಿ, ಕೆ.ವಿರೂಪಾಕ್ಷಗೌಡ, ಮೋಹನ್ ಕಾಳಾಪುರ, ಪಿಡಿಒ, ಗ್ರಾಪಂ ಕಾರ್ಯದರ್ಶಿಗಳು, ಸ್ವಸಹಾಯ ಸಂಘಗಳ ಅಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net