ಬಳ್ಳಾರಿ : ಟಿಪ್ಪರ್ ಲಾರಿಯೊಂದು ಚಲಿಸುತ್ತಿದ್ದ ಬೈಕ್ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಗವಿಯಪ್ಪ ವೃತ್ತದಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಜೋಳದರಾಶಿ ಗ್ರಾಮದ ವೀರೇಶ್( 34) ಮೃತ. ರಾಯಲ್ ವೃತ್ತದಿಂದ ಹೊಸ ಬಸ್ ನಿಲ್ದಾಣ ರಸ್ತೆ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.