ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಹಾಗೂ ಸಿದ್ದಾಪುರ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಕುರಿಹಟ್ಟಿ ಬೋಸಯ್ಯ, ರಹಮತ್, ಜಯಕುಮಾರ್ ನಾಯ್ಕ, ಧನುಂಜಯ, ಬಸವಾರೆಡ್ಡಿ, ರಘುನಾಯ್ಕ ಇತರರಿದ್ದರು.
ಕಾನಹೊಸಹಳ್ಳಿ: ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಹಾಗೂ ಸುಗಮ ಸಂಚಾರಕ್ಕೆ ಸಾರ್ವಜನಿಕರ ಹಿತದೃಷ್ಟಿಯಿಂದ ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಚಿಕ್ಕಜೋಗಿಹಳ್ಳಿ ಹಾಗೂ ಸಿದ್ದಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ದಶಕಗಳಿಂದ ಜನರು ಎದುರಿಸುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಚಿಕ್ಕಜೋಗಿಹಳ್ಳಿ ಹಾಗೂ ಸಿದ್ದಾಪುರ ರಸ್ತೆಯಲ್ಲಿ ಎರಡು ಸೇತುವೆ ನಿರ್ಮಾಣಕ್ಕೆ 3ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಾನಹೊಸಹಳ್ಳಿ ರಸ್ತೆ ಹಾಳಾಗಿದ್ದು, ಮುಂದಿನ ದಿನಗಳಲ್ಲಿ ಅನುದಾನ ನೀಡಲಾಗುವುದು. ತಾಲೂಕಿನ ಎಲ್ಲ ರಾಜ್ಯ ರಸ್ತೆ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಗ್ರಾಮೀಣ ರಸ್ತೆಗಳಿಗೆ ನಿರಂತರ ಉನ್ನತಿಕರಣ ನಡೆದಿದೆ. ಈ ವರ್ಷ ಹೆಚ್ಚಿನ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.