ಸ್ವಾವಲಂಬಿ ಜೀವನ ಕಟ್ಟಿಕೊಳ್ಳಿ

ಸಿರಗುಪ್ಪ ತಾಲೂಕಿನ ಇಬ್ರಾಹಿಂಪುರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣಪತ್ರ ನೀಡಲಾಯಿತು.
ಸಿರಗುಪ್ಪ ತಾಲೂಕಿನ ಇಬ್ರಾಹಿಂಪುರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣಪತ್ರ ನೀಡಲಾಯಿತು.
Published on
ಸಿರಗುಪ್ಪ: ಮಹಿಳೆಯರು ಕುಟುಂಬದ ಸದಸ್ಯರ ಮೇಲೆ ಅವಲಂಬಿತರಾಗದೆ ಸ್ವಾವಲಂಬಿ ಜೀವನ ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ಹೇಳಿದರು.
ಇಬ್ರಾಹಿಂಪುರ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು. ಸಂಘದ ಸದಸ್ಯೆಯರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದಕ್ಕೆ ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನವನ್ನು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ನೀಡಲಾಗುತ್ತಿದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಸಿಕಂದರ್, ಮೆಹಬೂಬ್ ಬಾಷಾ, ಒಕ್ಕೂಟದ ಅಧ್ಯಕ್ಷೆ ದೇವಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಮೇಲ್ವಿಚಾರಕಿ ನಾಗವೇಣಿ, ಸೇವಾಪ್ರತಿನಿಧಿ ಮಾರೆಮ್ಮ, ಆನಂದಮ್ಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net