ಕ್ಯಾಂಡಲ್ ಮಾರ್ಚ್‌ನಲ್ಲಿ ರೈತ ಸಂಘ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸಾರ್ವಜನಿಕರು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ನಗರದ ನಾನಾ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು. ಸಂಘದ ಪದಾಧಿಕಾರಿಗಳಾದ ಲಕ್ಷ್ಮಣ್ ಹವಾಲ್ದಾರ್, ಮಲ್ಲಿಕಾರ್ಜುನ, ರಾಮಕೃಷ್ಣ, ಚಂದ್ರಕಲಾ, ವಿಜಯ, ಸರೋಜ, ಗಿರಿಜಾ, ಮಂಜುಳಾ, ವಿನಯ್ ಕುಮಾರ್, ರುದ್ರಮುನಿ, ಅಂಜಿನಪ್ಪ, ಸುರೇಂದ್ರ ಇದ್ದರು.