ಬಳ್ಳಾರಿ : ಇಲ್ಲಿನ ಗವಿಯಪ್ಪ ವೃತ್ತದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನ ಏರ್‌ಬ್ಯಾಗ್‌ಗಳು ತಕ್ಷಣ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಸ್ಥಳೀಯರು ತಕ್ಷಣ ಚಾಲಕನ ನೆರವಿಗೆ ಧಾವಿಸಿದ್ದಾರೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.