ಕೂಡ್ಲಿಗಿ ಮುಖ್ಯರಸ್ತೆಯಲ್ಲಿ ಬೆಳಕಿನ ಸಂಭ್ರಮ

ಕೂಡ್ಲಿಗಿ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬೀದಿ ದೀಪ ಅಳವಡಿಕೆ ಮಾಡಿರುವುದರಿಂದ ಬೆಳಕಿರುವುದು.
ಕೂಡ್ಲಿಗಿ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬೀದಿ ದೀಪ ಅಳವಡಿಕೆ ಮಾಡಿರುವುದರಿಂದ ಬೆಳಕಿರುವುದು.
Published on
ಕೂಡ್ಲಿಗಿ: ಪಟ್ಟಣದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ‘ಕೂಡ್ಲಿಗಿ ಮುಖ್ಯ ರಸ್ತೆಗೆ ಆವರಿಸಿದ ಕತ್ತಲು’ ಶೀರ್ಷಿಕೆಯಡಿ ಕಳೆದ ಶನಿವಾರ ‘ವಿಜಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಸೋಮವಾರ ಬೀದಿ ದೀಪಗಳನ್ನು ಅಳವಡಿಸಿದ್ದಾರೆ.
ಮೇ 9ರಂದು ಪ್ರಕಟಿತ ವರದಿ.

ಮಹಾತ್ಮ ಗಾಂಧಿ ರಸ್ತೆಯಲ್ಲಿ ಬೀದಿ ದೀಪ ಅಳವಡಿಕೆಗಾಗಿ ಕಳೆದ ಆರು ತಿಂಗಳ ಹಿಂದೆ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಕಾಮಗಾರಿ ಆಮೆ ಗತಿಯಲ್ಲಿ ಸಾಗಿತ್ತು. ಬೀದಿ ದೀಪಗಳ ಬೆಳಕಿಲ್ಲದೆ ಸಾರ್ವ ಜನಿಕರು ಕತ್ತಲಲ್ಲಿ ತಿರುಗಾಡುವ ಪರಿಸ್ಥಿತಿ ಎದುರಾಗಿತ್ತು.
ಅನೇಕರು ಕತ್ತಲಲ್ಲಿ ಬಿದ್ದು ಗಾಯಗೊಂಡಿದ್ದರು. ಇದರಿಂದಾಗಿ ‘ವಿಜಯವಾಣಿ’ ವರದಿ ಪ್ರಕಟಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಎಇಇ ಕೆ.ನಾಗನಗೌಡ, ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ತ್ವರಿತವಾಗಿ ಬೀದಿದೀಪ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಜನರಿಗೆ ಆಗಿರುವ ತೊಂದರೆ ತಪ್ಪಿಸಿದ್ದೇವೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net