ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಸಂಭ್ರಮಾಚರಣೆ ನಡೆಯಿತು. ಕಾರ್ಯದರ್ಶಿ ಚಿನ್ನಿಕೃಷ್ಣ, ಮುಖಂಡರಾದ ಮಹಾದೇವ, ಅಮರೇಶ್, ಸಿದ್ದು, ವೀರೇಶ್ ಇತರರಿದ್ದರು.
ಬಳ್ಳಾರಿ : ರಾಜ್ಯದ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಹಿನ್ನೆಲೆ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಬಳಿಕ ಸುದ್ದಿಗಾರರೊಂದಿಗೆ ಯುವ ಕಾಂಗ್ರೆಸ್‌ನ ಜಿಲ್ಲಾ ಕಾರ್ಯದರ್ಶಿ ಚಿನ್ನಿಕೃಷ್ಣ ಮಾತನಾಡಿ, ಯಾವುದೇ ರಾಜಕೀಯ ಹಿನ್ನೆಲೆ ಹಾಗೂ ಗಾಡ್‌ಫಾದರ್ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶಿಸಿದ ಡಿ.ಕೆ. ಶಿವಕುಮಾರ್ ಅವರು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆಯುತ್ತಾ ರಾಜ್ಯದ ಉನ್ನತ ನಾಯಕತ್ವದ ಸ್ಥಾನಕ್ಕೆ ತಲುಪಿದ್ದಾರೆ. ಸಂಕಷ್ಟದ ಸಂದರ್ಭಗಳಲ್ಲಿಯೂ ಧೃತಿಗೆಡದೆ ಪಕ್ಷವನ್ನು ಮುನ್ನಡೆಸಿದ ಅವರ ರಾಜಕೀಯ ಪಯಣ ಪ್ರತಿಯೊಬ್ಬ ಕಾರ್ಯಕರ್ತನಿಗೂ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಕೆಲಸಗಳನ್ನು ಮಾಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಮಾತಿಗೆ ಬದ್ಧತೆ ಮತ್ತು ನೈತಿಕ ಮೌಲ್ಯಗಳಿಗೆ ಅವರು ನೀಡಿರುವ ಆದ್ಯತೆ ಇಂದಿನ ರಾಜಕಾರಣಕ್ಕೆ ಮಾದರಿಯಾಗಿದೆ ಎಂದು ಹೇಳಿದರು.