ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆರೋಗ್ಯ ನ್ಯೂನ್ಯತೆಗಳನ್ನು ಗುರುತಿಸಬೇಕು.ಇದರಿಂದ ಮಕ್ಕಳನ್ನು ಸದೃಢರನ್ನಾಗಿಸಲು ಕೈಗೊಳ್ಳಬಹುದಾದ ಯೋಜನೆಗಳನ್ನು ರೂಪಿಸಬಹುದು ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಸೂಕ್ತ-ಸಲಹೆ ಸೂಚನೆ ನೀಡಿದರು. ಶಾಸಕರಾದ ನಾರಾಭರತರೆಡ್ಡಿ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗೇಂದ್ರ ಸಭೆ ಗೈರಾದರು. ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಶಾಸಕಿ ಅನ್ನಪೂರ್ಣ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಕೆಲವೊಂದು ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.