ಸಿರಗುಪ್ಪದಲ್ಲಿ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರಿಗೆ ಆಯೋಜಿಸಿದ್ದ ಎಸ್‌ಐಆರ್ ಮತಪಟ್ಟಿ ಪರಿಷ್ಕೃತ ಮಾರ್ಗದರ್ಶಿ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಪ್ರಚಾರ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಮೋಕಾ, ಉಪಾಧ್ಯಕ್ಷ ಶಂಕ್ರಪ್ಪ, ತಾಲೂಕು ಅಧ್ಯಕ್ಷ ಕೆ.ಮಲ್ಲಿಕಾರ್ಜುನ ಸ್ವಾಮಿ ಇತರರಿದ್ದರು.
ಸಿರಗುಪ್ಪ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸಿದಾಗ ಬೂತ್‌ಮಟ್ಟದಲ್ಲಿ ಅಕ್ರಮ ಮತದಾನ ತಡೆಯಲು ಸಾಧ್ಯ ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
ಪಟ್ಟಣದ ಅಭಯಾಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರಿಗೆ ಆಯೋಜಿಸಿದ್ದ ಎಸ್‌ಐಆರ್ ಮತಪಟ್ಟಿ ಪರಿಷ್ಕೃತ ಮಾರ್ಗದರ್ಶಿ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಪ್ರಚಾರ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.
ಮತದಾರರು ಎರಡು ಕಡೆ ಮತದಾನದ ಚೀಟಿ ಹೊಂದಿರುವುದು, ಮೃತಪಟ್ಟ ಮತದಾರರ ಹೆಸರಿನಲ್ಲಿ ಬೇರೊಬ್ಬರು ಮತ ಚಲಾಯಿಸುವುದನ್ನು ಬೂತ್ ಮಟ್ಟದಲ್ಲಿ ತಡೆಯಬೇಕು. ಕೆಲವು ಚುನಾವಣೆಯಲ್ಲಿ ಒಂದು ಮತದ ಅಂತರದಿಂದ ಸೋಲು-ಗೆಲುವು ನಿರ್ಧಾರವಾಗಿವೆ. ಇದರಿಂದಾಗಿ ಕಾರ್ಯಕರ್ತರು ಮತದಾರರ ಪಟ್ಟಿ ಪರಿಶೀಲಿಸಿ ಚುನಾವಣೆ ಅಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ವಿಬಿ ಜಿ ರಾಮ್ ಜಿ ಯೋಜನೆ ಹೊಸ ತಂತ್ರಜ್ಞಾನ ಅಳವಡಿಸಿ ಗ್ರಾಮೀಣ ಭಾಗದವರಿಗೆ ಹೆಚ್ಚು ಉಪಯುಕ್ತವಾಗುವಂತೆ ಮಾಡಲಾಗಿದೆ. ಈ ಯೋಜನೆ ಕುರಿತು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದರು.
ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಗುರೂಜಿ ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ನೀಡಿದರು. ಪ್ರಮುಖರಾದ ಶಾಂತಕುಮಾರ್ ಸ್ವಾಮಿ, ಬೆಳಗಲ್ ಬಸವರಾಜ, ಗಂಗಾಧರ, ಮಾರೇಶ, ಶಿವರಾಮಗೌಡ, ಶಿವಪ್ಪ, ಪಿಡ್ಡಯ್ಯ ಇದ್ದರು.