

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಆ.8(ಶನಿವಾರ)ದಂದು ಸಂಜೆ 6 ಗಂಟೆಗೆ ಸಾಹಿತಿ ಡಾ. ಚಿದಾನಂದ ಸಾಲಿ ಅವರ ಸಾಹಿತ್ಯ ಹಾಗೂ ಒಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಕವಿ ಆರಿಫ್ ರಾಜಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಲೋಹಿಯಾ ಪ್ರಕಾಶನದ ಸಿ. ಚನ್ನಬಸವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ನಿರ್ವಹಣೆಯನ್ನು ಡಾ. ನಾಗರಾಜ ಬಸರಕೋಡು ವಹಿಸಲಿದ್ದಾರೆ. ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.