ಮಕ್ಕಳು ಮೊಬೈಲ್‌ನಿಂದ ದೂರವಿರಲಿ

ಸಂಡೂರು ತಾಲೂಕಿನ ಹೊಸ ದರೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಸಿಆರ್‌ಪಿ ಯಾಸ್ಮಿನ್ ಜಂಗಲ್ ನಾಯಕ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಇತರರಿದ್ದರು.
ಸಂಡೂರು ತಾಲೂಕಿನ ಹೊಸ ದರೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಸಿಆರ್‌ಪಿ ಯಾಸ್ಮಿನ್ ಜಂಗಲ್ ನಾಯಕ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಪಂ ಮಾಜಿ ಉಪಾಧ್ಯಕ್ಷ ಗುರುಮೂರ್ತಿ ಸಲಹೆ
  • ಸಂಡೂರು ಹೊಸ ದರೋಜಿ ಕಲಿಕಾ ಹಬ್ಬ
ಸಂಡೂರು: ಕಲಿಕಾ ಹಬ್ಬದಲ್ಲಿ ಭಾಗವಹಿಸುವಿಕೆಯಿಂದ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುತ್ತದೆ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಗುರುಮೂರ್ತಿ ಅಭಿಪ್ರಾಯಪಟ್ಟರು.
ಹೊಸ ದರೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ತೋರಣಗಲ್ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳಿಗಾಗಿ ಕಲಿಕಾ ಹಬ್ಬದಂತಹ ಕೌಶಲ ಕಾರ್ಯಕ್ರಮ ಆಯೋಜಿಸಲು ಇಲಾಖೆ ಕ್ರಮವಹಿಸಬೇಕು. ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು ಎಂದರು.
ಸಿಆರ್‌ಪಿ ಯಾಸ್ಮಿನ್ ಜಂಗಲ್ ನಾಯಕ ಮಾತನಾಡಿ, ಕಲಿಕಾ ಹಬ್ಬದಲ್ಲಿ ಕತೆ ಕಟ್ಟುವುದು, ಮೋಜಿನ ಗಣಿತ ಕಲಿಕಯುವುದು, ಮೆಮೋರಿ ಗೇಮ್‌ಗಳನ್ನು ಆಡುವ ಮೂಲಕ ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದರು.
ಗ್ರಾಪಂ ಸದಸ್ಯ ಮಾಯಣ್ಣ, ಎಸ್ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಯರ‌್ರಿಸ್ವಾಮಿ, ರಂಗಸ್ವಾಮಿ, ಕುನ್ನಿ ಹನುಮಂತಪ್ಪ, ಈರಮ್ಮ, ರಫಿಯಾ ರಮೀಜಾ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ, ಶಿಕ್ಷಕರಾದ ಉಮಾದೇವಿ, ಅಂಬರೀಷ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net