ಅತಿಕ್ರಮಣ ತೆರವುಗೊಳಿಸಿ

ಕೂಡ್ಲಿಗಿಯಲ್ಲಿ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್‌ಗೆ ಕರವೇ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಕಾಟೇರ ಹಾಲೇಶ, ಕೆ.ನಾಗರಾಜ, ಕೆ.ರಮೇಶ, ಪ್ರದೀಪ ಕುಮಾರ ಇತರರಿದ್ದರು.
ಕೂಡ್ಲಿಗಿಯಲ್ಲಿ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್‌ಗೆ ಕರವೇ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಕಾಟೇರ ಹಾಲೇಶ, ಕೆ.ನಾಗರಾಜ, ಕೆ.ರಮೇಶ, ಪ್ರದೀಪ ಕುಮಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಾದಚಾರಿ
  • ತೀವ್ರ
  • ತೊಂದರೆ
ಕೂಡ್ಲಿಗಿ: ಪಟ್ಟಣದ ಪುಟ್‌ಪಾತ್‌ಗಳಲ್ಲಿನ ಅತಿಕ್ರಮಣ ತೆರವುಗೊಳಿಸುವಂತೆ ಕರವೇ ಪದಾಧಿಕಾರಿಗಳು ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್‌ಗೆ ಸೋಮವಾರ ಮನವಿ ಸಲ್ಲಿಸಿದರು.
ಪುಟ್‌ಪಾತ್ ಮೇಲೆ ನಿತ್ಯ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಾರೆ. ಫುಟ್‌ಪಾತ್‌ಗಳನ್ನು ಅಂಗಡಿಗಳು ಹಾಗೂ ತಾತ್ಕಾಲಿಕ ವ್ಯಾಪಾರ ಮಳಿಗೆಯವರು ಅತಿಕ್ರಮಿಸಿರುವುದರಿಂದ ಮಣದಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಸಾರ್ವಜನಿಕರು ರಸ್ತೆಯಲ್ಲಿ ನಡೆಯಬೇಕಾದ ಅನಿವಾರ್ಯತೆಯಿದೆ. ಇದರಿಂದ ವಾಹನ ದಟ್ಟಣೆಯಾಗಿ ಅಪಘಾತಗಳಾಗುವ ಸಾಧ್ಯತೆ ಇದೆ. ಪಾದಚಾರಿಗಳಿಗೆ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಿನಂತಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net