ಗಮನಾರ್ಹ ಭಾಗವನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು. ಎಡಿಸಿ ಮಹಮ್ಮದ್ ಎನ್. ಜುಬೇರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಒತ್ತುವರಿ ಮಾಡಲಾಗಿದ್ದ ಎರಡು ಎಕರೆ ಜಮೀನನ್ನು ತೆರವುಗೊಳಿಸಿ, ಅದನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಸ್ಥಳೀಯ ಅಧಿಕಾರಿಗಳ ತಂಡದೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ, ಅಕ್ರಮವಾಗಿ ನಿರ್ಮಿಸಿದ್ದ ಬೇಲಿ ಮತ್ತು ಇತರ ತ್ಯಾಜ್ಯವನ್ನು ಜೆಸಿಬಿ ಮೂಲಕ ತೆರವುಗೊಳಿಸಿತು.