ಮುಂದುವರೆದ ತೆರವು ಕಾರ್ಯಾಚರಣೆ

ಬಳ್ಳಾರಿಯ ಮುಂಡರಗಿ ಕೈಗಾರಿಕಾ ಪ್ರದೇಶದಲ್ಲಿ ಒತ್ತುವರಿಯಾದ ಭೂಮಿಯನ್ನು ವಶಪಡಿಸಿಕೊಂಡು ನಾಮಫಲಕ ಅಳವಡಿಸಲಾಯಿತು. ಎಡಿಸಿ ಮಹಮ್ಮದ್ ಎನ್.ಜುಬೇರ್, ಎಸಿ ಎಚ್.ಡಿ.ರಾಜೇಶ್, ತಹಸೀಲ್ದಾರ್ ಟಿ.ರೇಖಾ, ಸಿಬ್ಬಂದಿ ಕೃಷ್ಣಪ್ಪ, ಮನೋಹರ್, ದೇವರಾಜ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅನಧಿಕೃತ ನಿರ್ಮಾಣ

ಬಳ್ಳಾರಿ :

ನಗರದ ಹೊರವಲಯದ ಮುಂಡರಗಿ ಕೈಗಾರಿಕಾ ಪ್ರದೇಶದ (ಹಂತ-1) ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಜಿಲ್ಲಾಡಳಿತ ಅಧಿಕಾರಿಗಳು ತೆರವುಗೊಳಿಸಿದರು.

ಮುಂಡರಗಿ ಗ್ರಾಮದ ಸರ್ವೇ ಸಂಖ್ಯೆ 177/2 ರ ವ್ಯಾಪ್ತಿಯ 1.07 ಎಕರೆ ಹಾಗೂ ಸರ್ವೇ ನಂ.322ರ 11.40 ಎಕರೆ ಖರಾಬು ಜಮೀನ ಸೇರಿ ಒಟ್ಟು 12 ಎಕರೆ ಸರ್ಕಾರಿ ಭೂಮಿ ವಶಪಡಿಸಿಕೊಳ್ಳಲಾಯಿತು. ಅಲ್ಲದೇ, ಸ್ಥಳದಲ್ಲಿ ಅನಧಿಕೃತ ನಿರ್ಮಾಣಗೊಂಡ ಶೆಡ್‌ಗಳನ್ನು ನೆಲಸಮಗೊಳಿಸಲಾಯಿತು. ತೆರವುಗೊಳಿಸಿದ ಜಮೀನಿನಲ್ಲಿ ಈ ಜಾಗವು ಸರ್ಕಾರಕ್ಕೆ ಸೇರಿದ್ದು, ಅತಿಕ್ರಮಣ ಮಾಡುವುದು ಶಿಕ್ಷಾರ್ಹ ಅಪರಾಧ ಎಂಬ ಎಚ್ಚರಿಕೆಯ ನಾಮ ಫಲಕ ಅಳವಡಿಸಲಾಯಿತು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net