ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲಿ

ಬಳ್ಳಾರಿಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ. ಅವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು. ಪದಾಧಿಕಾರಿಗಳಾದ ಬಿ.ವಿ.ಗೌಡ, ವಿ.ವೀರೇಶ, ವೆಂಕಟರಮಣ, ರಾಜಪ್ಪ ಇತರರಿದ್ದರು.
ಬಳ್ಳಾರಿಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ. ಅವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು. ಪದಾಧಿಕಾರಿಗಳಾದ ಬಿ.ವಿ.ಗೌಡ, ವಿ.ವೀರೇಶ, ವೆಂಕಟರಮಣ, ರಾಜಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹವಾಮಾನ
  • ವೈಪರೀತ್ಯ
  • ಮಳೆ
ಕಂಪ್ಲಿ: ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬರಗಾಲ ಎಂದು ಘೋಷಿಸಿ ಪರಿಹಾರ ವಿತರಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಅವರಿಗೆ ಬಳ್ಳಾರಿಯಲ್ಲಿ ರೈತಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
ಸಂಘದ ಕಾರ್ಯಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಮುಂಗಾರು ಮಳೆಯಾಗದೆ ಜಲಾಶಯಗಳು ಭರ್ತಿಯಾಗಿಲ್ಲ. ತುಂಗಭದ್ರಾ ಜಲಾಶಯದಲ್ಲಿ ನೀರಿದ್ದರೂ ಹೊಸ ಕ್ರಸ್ಟ್ ಗೇಟ್ ಅಳವಡಿಸುವ ಸಲುವಾಗಿ ಕಳೆದ ವರ್ಷ ರೈತರು ಒಂದು ಬೆಳೆ ಬೆಳೆಯದೆ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಮಳೆ ಕೊರತೆಯಾಗಿದ್ದು ಜಲಾಶಯ ಭರ್ತಿಗೊಂಡಿಲ್ಲ.
ಬರಗಾಲ ಎಂದು ಘೋಷಿಸಿ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸಬೇಕು. ಜನ-ಜಾನುವಾರುಗಳಿಗೆ ಕುಡಿವ ನೀರಿಗಾಗಿ ನದಿಗೆ ಜಲಾಶಯದ ನೀರನ್ನು ಕೂಡಲೇ ಹರಿಸಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ವಿ.ವೀರೇಶ, ಪದಾಧಿಕಾರಿಗಳಾದ ವೆಂಕಟರಮಣ, ರಾಜಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net