ನಾಡಿದ್ದು ಆದಿವಾಸಿಗಳಿಗಾಗಿ ಸಮಾವೇಶ

ವಿಶ್ವ ಆದಿವಾಸಿ ದಿನಾಚರಣೆ ಪೂರ್ವಭಾವಿಯಾಗಿ ಕಂಪ್ಲಿಯಲ್ಲಿ ನಡೆದ ಸಂಘಟನಾ ಸಭೆಯಲ್ಲಿ ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಪಿ.ಶಿಕಾರಿರಾಮು ಮಾತನಾಡಿದರು. ಪ್ರಮುಖರಾದ ಎಚ್.ಪಿ.ಶ್ರೀಕಾಂತ, ಜಾನಕಿ, ಶಿಕಾರಿ ಬಾಬು ಹಾಗೂ ಹರಿಕೃಷ್ಣ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಪಿ.ಶಿಕಾರಿರಾಮು ಮಾಹಿತಿ
  • ಸಂಘಟನಾ ಸಭೆ

ಕಂಪ್ಲಿ: ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ಆ.9ರಂದು ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಪಿ.ಶಿಕಾರಿರಾಮು ತಿಳಿಸಿದ್ದಾರೆ.

ತುಳಜಾಭವಾನಿ ದೇವಸ್ಥಾನದ ಆವರಣದಲ್ಲಿ ನಡೆದ ಹಕ್ಕಿಪಿಕ್ಕಿ, ಪಾರ್ದಿ ಹಾಗೂ ಶಿಕಾರಿ ಸಮುದಾಯಗಳ ಸಂಘಟನಾ ಸಭೆಯಲ್ಲಿ ಮಾತನಾಡಿ, 32ನೇ ವಿಶ್ವ ಆದಿವಾಸಿ ದಿನಾಚರಣೆ ನಿಮಿತ್ತ ಈ ಸಮಾವೇಶ ಆಯೋಜಿಸಲಾಗಿದ್ದು, 49 ಆದಿವಾಸಿ ಬುಡಕಟ್ಟು ಸಮುದಾಯದವರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು, ಆದಿವಾಸಿಗಳ ಸಂಘಟನೆ ಹಾಗೂ ವಿಶಿಷ್ಟ ಕಲೆಗಳನ್ನು ಸಂರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲು ಈ ಸಮಾವೇಶ ವೇದಿಕೆಯಾಗಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net