ಎಪಿಎಂಸಿಯಲ್ಲಿ ಜ.17ರಂದು ಸಮಾವೇಶ

ಜಿ.ಜನಾರ್ದನರೆಡ್ಡಿ
ಜಿ.ಜನಾರ್ದನರೆಡ್ಡಿ
Published on

ಪ್ರಮುಖ ಮುಖ್ಯಾಂಶಗಳು

  • ಸಮಾವೇಶ
ಬಳ್ಳಾರಿ : ಬ್ಯಾನರ್ ಗಲಾಟೆ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಇಲ್ಲಿನ ಎಪಿಎಂಸಿ ಆವರಣದಲ್ಲಿ ಜ.17ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜಿ.ಜನಾರ್ದನರೆಡ್ಡಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿತ್ತು. ಆದರೆ, ಪಿಯು ಪ್ರಾಯೋಗಿಕ ಪರೀಕ್ಷೆ ನಡೆಯುವುದರಿಂದ ಸ್ಥಳ ಬದಲಾವಣೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಪ ನಾಯಕ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ರಾಜ್ಯದ ಇತರರ ನಾಯಕರು ಆಗಮಿಸಲಿದ್ದಾರೆ. ಅಲ್ಲದೆ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಎಚ್.ಡಿ.ಕುಮಾರಸ್ವಾಮಿಗೂ ಆಹ್ವಾನಿಸಿದ್ದು ಅವರು ಕೂಡ ಬರುವ ಸಾಧ್ಯತೆಯಿದೆ. ಸಮಾವೇಶಕ್ಕೆ ಜಿಲ್ಲೆಯ ಸುತ್ತಮುತ್ತಲಿನ ಮೂವತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸೇರಲಿದ್ದಾರೆ. ಈಗಾಗಲೇ ಸ್ಥಳ ಪರಿಶೀಲಿಸಿದ್ದು ಸಮಾವೇಶಕ್ಕೆ ರೂಪುರೇಷೆಗಳು ಸಿದ್ಧತೆಗೊಂಡಿವೆ ಎಂದರು.
ಈ ಬೃಹತ್ ಸಮಾವೇಶದಲ್ಲಿಯೇ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಬಗ್ಗೆ ರಾಜ್ಯ ನಾಯಕರು ನಿರ್ಧರಿಸಲಿದ್ದಾರೆ. ನಗರದ ಬ್ಯಾನರ್ ಗಲಾಟೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ಹಾಗೂ ಕಾಂಗ್ರೆಸ್ ಮುಖಂಡರಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದರ್ಪ ಖಂಡಿಸಿ ಪ್ರತಿಭಟಿಸಿ ಸಮಾವೇಶ ನಡೆಸಲಾಗುವುದು ಎಂದರು.
ವಿಧಾನ ಪರಿಷತ್ ಸಚೇತಕ ರವಿಕುಮಾರ್ ಮಾತನಾಡಿ, ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಶಾಸಕ ನಾರಾ ಭರತ್‌ರೆಡ್ಡಿ, ಅಪ್ತ ಸತೀಶ್‌ರೆಡ್ಡಿ ಹಾಗೂ ಬೆಂಬಲಿಗರು ಬಂಧನಗೊಳ್ಳಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿರುವುದು ಮುಖ್ಯ ಬೇಡಿಕೆಯಾಗಿದೆ ಎಂದರು. ಮಾಜಿ ಸಂಸದ ಸಣ್ಣಫಕೀರಪ್ಪ, ಮುಖಂಡರಾದ ಅಡವಿಸ್ವಾಮಿ, ದಮ್ಮೂರ ಶೇಖರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net