ಖಾಸಗಿ ಶಾಲೆಗಳ ಡೊನೇಷನ್ ನಿಯಂತ್ರಿಸಿ

ಬಳ್ಳಾರಿಯ ಗವಿಯಪ್ಪ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವಲುಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಎಸ್.ಎನ್.ನರಸಿಂಹರಾಜು,  ಪದಾಧಿಕಾರಿಗಳಾದ ವಿ.ಎಸ್.ಸಾಗರ್, ಮೋಹನ್, ಅಶೋಕ ಬಡಿಗೇರ್, ಮುಬಾರಕ್, ವೀರೇಶ್ ಕುಮಾರ, ದೊಡ್ಡನಗೌಡ ಇತರರಿದ್ದರು.
ಬಳ್ಳಾರಿಯ ಗವಿಯಪ್ಪ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವಲುಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಎಸ್.ಎನ್.ನರಸಿಂಹರಾಜು, ಪದಾಧಿಕಾರಿಗಳಾದ ವಿ.ಎಸ್.ಸಾಗರ್, ಮೋಹನ್, ಅಶೋಕ ಬಡಿಗೇರ್, ಮುಬಾರಕ್, ವೀರೇಶ್ ಕುಮಾರ, ದೊಡ್ಡನಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ
  • ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ
ಬಳ್ಳಾರಿ : ಶಿಕ್ಷಣವು ವ್ಯಾಪಾರೀಕರಣಗೊಳ್ಳುತ್ತಿರುವುದನ್ನು ಖಂಡಿಸಿ ಇಲ್ಲಿನ ಡಿಡಿಪಿಐ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವಲುಪಡೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಗವಿಯಪ್ಪ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ವೃತ್ತ ಮೂಲಕ ಡಿಡಿಪಿಐ ಕಚೇರಿವರೆಗೆ ನಡೆಯಿತು. ಪ್ರತಿಭಟನೆಯಲ್ಲಿ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.
ಕರವೇ ಕಾವಲುಪಡೆಯ ಜಿಲ್ಲಾಧ್ಯಕ್ಷ ಎಸ್.ಎನ್.ನರಸಿಂಹರಾಜು ಮಾತನಾಡಿ, ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಾರಾಸಗಟಾಗಿ ಅನುಮತಿ ನೀಡುತ್ತಿರುವುದರಿಂದ ಜಿಲ್ಲಾದ್ಯಂತ ಶಿಕ್ಷಣ ಮಾರಾಟದ ವಸ್ತುವಾಗಿದೆ. ಖಾಸಗಿಯಲ್ಲಿ ಪ್ರಾಥಮಿಕ ಶಾಲೆಗೆ ಪ್ರವೇಶಕ್ಕೆ 50 ಸಾವಿರದಿಂದ 1 ಲಕ್ಷ ರೂ. ವರೆಗೆ ಬಹಿರಂಗವಾಗಿಯೇ ಡೊನೇಷನ್ ಮೂಲಕ ವಸೂಲಿ ಮಾಡಲಾಗುತ್ತಿದೆ. ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಪಠ್ಯಪುಸ್ತಕಗಳು ಜಿಲ್ಲಾಡಳಿತ ಹಾಗೂ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲೇ ವಿತರಣೆಯಾಗಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಡೊನೇಷನ್ ಹಾವಳಿ ತಡೆಗಟ್ಟಲು ವಿಶೇಷ ತಂಡ ರಚಿಸಿ, ಎಲ್ಲ ಖಾಸಗಿ ಸಂಸ್ಥೆಗಳ ಮೇಲೆ ಸಮಗ್ರ ತನಿಖೆ ನಡೆಸಬೇಕು. ಕನ್ನಡ ಶಾಲೆಗಳ ಅಭಿವೃದ್ಧಿ ಹಾಗೂ ಕನ್ನಡ ಮಾಧ್ಯಮ ಶಾಲೆ-ಕಾಲೇಜುಗಳ ಸ್ಥಿತಿಗತಿ ವೀಕ್ಷಿಸಲು ಡಿಸಿ ಅವರ ನೇತೃತ್ವದಲ್ಲಿ ತುರ್ತು ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net