ಡೊನೇಷನ್ ಹಾವಳಿ ನಿಯಂತ್ರಿಸಲಿ

ಡೊನೇಷನ್ ಹಾವಳಿ ನಿಯಂತ್ರಿಸಲು ಒತ್ತಾಯಿಸಿ ಕೊಟ್ಟೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಜಿ.ಕೆ.ಅಮರೇಶ್‌ಗೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ರಾಜ್ಯ ಉಪಾಧ್ಯಕ್ಷ, ಎನ್.ಭರಮಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್, ವಕೀಲ ಹನುಮಂತಪ್ಪ, ಡಿಎಸ್‌ಎಸ್ ತಾಲೂಕು ಅಧ್ಯಕ್ಷ ಪಿ.ಚಂದ್ರಶೇಖರ್ ಇತರರಿದ್ದರು.
ಡೊನೇಷನ್ ಹಾವಳಿ ನಿಯಂತ್ರಿಸಲು ಒತ್ತಾಯಿಸಿ ಕೊಟ್ಟೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಜಿ.ಕೆ.ಅಮರೇಶ್‌ಗೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ರಾಜ್ಯ ಉಪಾಧ್ಯಕ್ಷ, ಎನ್.ಭರಮಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್, ವಕೀಲ ಹನುಮಂತಪ್ಪ, ಡಿಎಸ್‌ಎಸ್ ತಾಲೂಕು ಅಧ್ಯಕ್ಷ ಪಿ.ಚಂದ್ರಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿ.ಮಲ್ಲಿಕಾರ್ಜುನ್ ಒತ್ತಾಯ
  • ಕೊಟ್ಟೂರು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ
ಕೊಟ್ಟೂರು: ಪಟ್ಟಣದ ಖಾಸಗಿ ಶಾಲಾ-ಕಾಲೇಜುಗಳು ಇಷ್ಟಾನುಸಾರ ಡೊನೇಷನ್ ಪಡೆದುಕೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿವೆ ಎಂದು ರಾಜ್ಯ ರೈತ ಸಂಘದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್ ಆರೋಪಿಸಿದರು.
ಪಟ್ಟಣದ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಜಿ.ಕೆ.ಅಮರೇಶ್‌ಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣವನ್ನು ವ್ಯಾಪಾರ ಮಾಡಿಕೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿವೆ. ಇದರಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ. ಶಿಕ್ಷಣ ಕ್ಷೇತ್ರವು ಉಳ್ಳವರ ಪಾಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂಬೇಡ್ಕರ್ ಸಂಘದ ತಾಲೂಕು ಘಟಕದ ಅಧ್ಯಕ್ಷ ಬದ್ದಿ ದುರುಗೇಶ್ ಮಾತನಾಡಿ, ಶ್ರೀಮಂತರ ಮಕ್ಕಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುವ ಸ್ಥಿತಿ ನಿರ್ಮಾಣವಾಗಿದ್ದು, ದೇಶದ ಪ್ರಗತಿಯ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಲ್ಲ ಎಂದು ಕಿಡಿಕಾರಿದರು.
ಅಧಿಕಾರಿಗಳು ಮನವಿ ಸ್ವೀಕರಿಸಲು ವಿಳಂಬ ಮಾಡಿದ್ದಕ್ಕಾಗಿ ಪ್ರತಿಭಟನಾಕಾರರು ಕೆಲ ಕಾಲ ಸಂಚಾರ ತಡೆದು ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪ್ರಮುಖರಾದ ಬದ್ದಿ ಮರಿಸ್ವಾಮಿ, ಅಲಬೂರು ಮಂಜುನಾಥ, ಎಲ್.ಕುಬೇರಪ್ಪ, ದೊಡ್ಡಬಸಪ್ಪ, ಎಲ್.ವಿಷ್ಣು, ಟಿ.ಸೋಮಶೇಖರ್, ವಕೀಲ ಶಿವರಾಜ್, ಕಲ್ಲಪ್ಪ, ಕೆಂಚಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net