1959ರ ಸುಮಾರಿಗೆ ನಿರ್ಮಾಣಗೊಂಡಿದ್ದ ಈ ಸೇತುವೆಯೀಗ ಶಿಥಿಲಗೊಂಡಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದು ಬಂದಾಗ ಸೇತುವೆ ಸಂಪೂರ್ಣ ಮುಳುಗಿ ಸಂಪರ್ಕ ಕಡಿತಗೊಳ್ಳುತ್ತದೆ. ಕೆಲವೊಮ್ಮೆ 30-40 ದಿನಗಳ ಕಾಲ ಸಂಪರ್ಕ ಸ್ಥಗಿತಗೊಂಡಿದ್ದ ಉದಾಹರಣೆ ಗಳು ಇವೆ. ಇದರಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರು, ರೈತರು ತೀವ್ರ ತೊಂದರೆ ಅನುಭವಿಸಿದ್ದಾರೆ. ಸುತ್ತಿ ಬಳಸಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.