ಸೌಲಭ್ಯಗಳನ್ನು ಕೇಳುವ ವಾತಾವರಣ ನಿರ್ಮಿಸಿ

ಸಿರಗುಪ್ಪ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಬೋಸುಬಾಳ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿದ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್, ಪಿಡಿಒ ಲೀಲಾವತಿ ಬಂಡೂರಿ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದೊಡ್ಡಬಸಪ್ಪ, ಶಿಕ್ಷಣ ಸಂಯೋಜಕ ತಮ್ಮನಗೌಡ ಇತರರಿದ್ದರು.
ಸಿರಗುಪ್ಪ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಬೋಸುಬಾಳ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿದ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್, ಪಿಡಿಒ ಲೀಲಾವತಿ ಬಂಡೂರಿ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದೊಡ್ಡಬಸಪ್ಪ, ಶಿಕ್ಷಣ ಸಂಯೋಜಕ ತಮ್ಮನಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಭಿವೃದ್ಧಿ
  • ಮಕ್ಕಳ ಹಕ್ಕು

ಸೌಲಭ್ಯಗಳನ್ನು ಕೇಳುವ ವಾತಾವರಣ ನಿರ್ಮಿಸಿ

ಸಿರಗುಪ್ಪ: ಗ್ರಾಮ ಸಭೆ ಗ್ರಾಪಂ ಮಟ್ಟದಲ್ಲಿ ಮಕ್ಕಳ ಹಕ್ಕುಗಳು, ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತು ಮಕ್ಕಳೇ ಚರ್ಚಿಸುವ ವಿಶೇಷ ವೇದಿಕೆಯಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.
ಭೈರಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಜಿಪಂ, ತಾಪಂ, ಗ್ರಾಪಂ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಆಯ-ವ್ಯಯ ಮಂಡಿಸಿ ಮಾತನಾಡಿದರು.
ಮಕ್ಕಳು ಹಕ್ಕುಗಳನ್ನು ಅನುಭವಿಸಲು ಹಾಗೂ ಹಕ್ಕುಗಳಿಗೆ ಚ್ಯುತಿ ಬಂದಾಗ ರಕ್ಷಣೆ ಮಾಡಿಕೊಳ್ಳಲು, ಬೇಕು-ಬೇಡಗಳನ್ನು ನಿರ್ಭಯವಾಗಿ ಹೇಳಿಕೊಳ್ಳಲು ವಿಶೇಷ ಗ್ರಾಮ ಸಭೆ ಸೂಕ್ತ ವೇದಿಕೆಯಾಗಿದೆ ಎಂದರು.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಅಗತ್ಯ ಸೌಲಭ್ಯಗಳನ್ನು ಕೇಳುವ ಮುಕ್ತ ವಾತಾವರಣ ನಿರ್ಮಿಸಿ, ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವದ ಜತೆ ಪ್ರಶ್ನೆ ಕೇಳುವ ಮನೋಭಾವ ಬೆಳೆಸಬೇಕು. ಸಮಾಜದ ಪ್ರಮುಖ ನಿರ್ಧಾರಗಳಲ್ಲಿ ಮಕ್ಕಳು ಭಾಗವಹಿಸುವಂತೆ ಪ್ರೋತ್ಸಾಹಿಸಿದರೆ. ಸಕ್ರಿಯ ನಾಗರಿಕರಾಗಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪಿಡಿಒ ಲೀಲಾವತಿ ಬಂಡೂರಿ ಅವರು 7ನೇ ತರಗತಿ ವಿದ್ಯಾರ್ಥಿನಿಯನ್ನು ದತ್ತು ಪಡೆದು ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ. ಶಾಲೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದೊಡ್ಡಬಸಪ್ಪ, ಉಪಾಧ್ಯಕ್ಷ ಗೋವಿಂದಪ್ಪ, ಬಿಇಒ ಗುರಪ್ಪ, ಸಿಡಿಪಿಒ ಪ್ರದೀಪ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮೌನೇಶ್, ಶಿಕ್ಷಣ ಸಂಯೋಜಕ ತಮ್ಮನಗೌಡ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಗೌಸಿಯಾ, ಚಟ್ಲ ವೆಂಕಟೇಶ್, ಮುಖ್ಯಶಿಕ್ಷಕ ರಾಮ್‌ಮೋಹನ್ ಬಾಬು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net