ಸಮೀಕ್ಷೆ ಬಳಿಕ ರೈತರಿಗೆ ಬೆಳೆಹಾನಿ ಪರಿಹಾರ

 ಅರೆ ಬಸಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ಎಇಇ ಕೆ.ಆರ್.ರಾಘವೇಂದ್ರ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಗೌಡ್ರು, ತಾಪಂ ಮಾಜಿ ಸದಸ್ಯ ಮೈದೂರು ಒ.ರಾಮಪ್ಪ, ಪ್ರಮುಖರಾದ ಜಯಲಕ್ಷ್ಮೀ, ಪೂಜಾರ್ ಕೃಷ್ಣನಾಯ್ಕ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ
  • ಕಾಮಗಾರಿಗೆ ಭೂಮಿ ಪೂಜೆ
ಹರಪನಹಳ್ಳಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.40 ಮಳೆ ಕೊರತೆಯಾಗಿದ್ದು, ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಅರೇ ಬಸಾಪುರ ಗ್ರಾಮದಲ್ಲಿ ಡಿ.ಎಂ.ಎಫ್ ಯೋಜನೆಯಡಿ ಮೂರು ಕೋಟಿ ರೂ. ವೆಚ್ಚದ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಧರಣಿಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು. ವಿರೋಧದ ನಡುವೆ ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ದುಡಿಯುವ ಕೈಗಳಿಗೆ ಕೆಲಸ ನೀಡಿಲ್ಲ ಎಂದು ಆರೋಪಿಸಿದರು.
ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಮಾತನಾಡಿ, ಸ್ಥಳೀಯರು ಗ್ರಾಮದ ಸ್ವಚ್ಛತೆ ಕಾಪಾಡಬೇಕು. ಕೆರೆಗಳ ಅಭಿವೃದ್ಧಿಗೆ 24 ಕೋಟಿ ರೂ. ಬಿಡುಗಡೆಯಾಗಿದೆ. ತಾಲೂಕು ವ್ಯಾಪ್ತಿಯ ಎಲ್ಲ ಕೆರೆಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net