ದತ್ತಾಂಶಗಳ ಸುರಕ್ಷತೆ ಅಗತ್ಯ

ಬಳ್ಳಾರಿಯ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ  ಪ್ರೊ.ಪಿ.ಸಿ. ಮಹಾಲನೋಬಿಸ್ ಜನ್ಮದಿನಾಚರಣೆ ಆಚರಿಸಲಾಯಿತು. ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್. ಕೆ. ಪತ್ರಿಬಸಪ್ಪ,  ಸಹಾಯಕ ನಿರ್ದೇಶಕರಾದ ಸಮೀರ್ ಪಟೇಲ್, ಎಸ್.ಒ. ಮಿತಿಲೇಶ್  ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆಡಳಿತಾತ್ಮಕ ದತ್ತಾಂಶಗಳ ಸಂಗ್ರಹಣೆ ಮುಖ್ಯ
ಬಳ್ಳಾರಿ : ಇಂದಿನ ದಿನಗಳಲ್ಲಿ ಆಡಳಿತಾತ್ಮಕ ದತ್ತಾಂಶಗಳ ಸಂಗ್ರಹಣೆ ಎಷ್ಟು ಮುಖ್ಯವೋ, ಅಷ್ಟೇ ಪ್ರಾಮುಖ್ಯತೆ ದತ್ತಾಂಶಗಳ ಸುರಕ್ಷತೆಗೂ ನೀಡಬೇಕಾಗಿದೆ ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಹೇಳಿದರು.
ನಗರದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಪ್ರೊ.ಪಿ.ಸಿ. ಮಹಾಲನೋಬಿಸ್ ಅವರ ಜನ್ಮದಿನಾಚರಣೆ ಅಂಗವಾಗಿ 20ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದತ್ತಾಂಶಗಳ ಸುರಕ್ಷತೆಯ ಬಗ್ಗೆ ನಾವೆಲ್ಲರೂ ಅಷ್ಟೇ ಕಾಳಜಿವಹಿಸುವುದು ಇಂದಿನ ಅಗತ್ಯವಾಗಿದೆ. ಯಾವುದೇ ದೇಶದ ಪ್ರಗತಿಗೆ ನಿಖರವಾದ ಅಂಕಿ-ಅಂಶಗಳು ಅತ್ಯಗತ್ಯ. ಕೃಷಿ, ಕೈಗಾರಿಕೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಂಖ್ಯಿಕ ದಿನಾಚರಣೆಯಂತಹ ಕಾರ್ಯಕ್ರಮಗಳು ಹೊಸ ದಿಕ್ಸೂಚಿ ಒದಗಿಸುತ್ತವೆ ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net