ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಕೆಪಿಎಸ್‌ಸಿ ಅಕ್ರಮ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ, ಎಬಿವಿಪಿ ಸಂಘಟನೆಯಿಂದ ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳಾದ ಪ್ರಭಾಕರ್, ನವೀನ್, ಪ್ರದೀಪ್, ಮಂಜುನಾಥ್ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಕೆಪಿಎಸ್‌ಸಿ ಅಕ್ರಮ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ, ಎಬಿವಿಪಿ ಸಂಘಟನೆಯಿಂದ ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳಾದ ಪ್ರಭಾಕರ್, ನವೀನ್, ಪ್ರದೀಪ್, ಮಂಜುನಾಥ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಬಿವಿಪಿ ಸಂಘಟನೆಯಿಂದ ಮನವಿ

ಬಳ್ಳಾರಿ :

ಕೆಪಿಎಸ್‌ಸಿಯಲ್ಲಿ ನಡೆದಿರುವ ನೇಮಕಾತಿ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ, ಇಲ್ಲಿ ನ ಗಡಿಗಿ ಚನ್ನಪ್ಪ ವೃತ್ತದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆಯಿಂದಪ್ರತಿಭಟನೆ ನಡೆಯಿತು.

ನಗರದ ಗಡಿಗಿ ಚನ್ನಪ್ಪ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯೂ ನಾನಾ ಪ್ರಮುಖ ರಸ್ತೆಗಳಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಅಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಲೋಪದಿಂದ ಸಮಸ್ಯೆಗೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಮರು ಪರೀಕ್ಷೆ ನಡೆಸಬೇಕು. ಶಿಕ್ಷಣ ಇಲಾಖೆಯ ಖಾಲಿ ಹುದ್ದೆಗಳನ್ನು ಶೀಘ್ರ ಖಾಯಂ ನೇಮಕಾತಿ ಮಾಡಬೇಕು. ಸರ್ಕಾರಿ ಉದ್ಯೋಗವು ಲಕ್ಷಾಂತರ ಯುವಜನರ ಕನಸಾಗಿದ್ದು, ಕೆಪಿಎಸ್‌ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿರುವುದು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದರು.
ರಾಜ್ಯದ ಸುಮಾರು 450 ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಶೂನ್ಯ ಪ್ರವೇಶಾತಿ ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಅವುಗಳನ್ನು ತಕ್ಷಣ ಖಾಯಂ ನೇಮಕಾತಿ ಮೂಲಕ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net