ನ್ಯಾ.ಎಚ್.ಎನ್. ನಾಗಮೋಹನ ದಾಸ್ ಆಯೋಗವು ನೀಡಿದ ವರದಿಯ ಪ್ರಕಾರ ಮೀಸಲಾತಿಯನ್ನು ಶೇ. 15ರಿಂದ ಶೇ.17ಕ್ಕೆ ಹಾಗೂ ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಈ ವರದಿಯನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸುವಂತೆ ಒತ್ತಾಯಿಸಲಾಯಿತು. ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ವಿಷಯದಲ್ಲೂ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಸಂಘಟನಕಾರರು ಮನವಿ ಮಾಡಿದರು.