ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟಿಸಿದರು. ಜಿಲ್ಲಾ ಕಾರ್ಯದರ್ಶಿ ಚಾನಾಳ್ ವಿಷ್ಣುವರ್ಧನ್‌ರೆಡ್ಡಿ , ನಗರ ಅಧ್ಯಕ್ಷ ಅಶೋಕ್ ಚೌಹಾಣ್, ಜಿಲ್ಲಾಧ್ಯಕ್ಷ ಗೋವರ್ದನ್ ಪುರೋಹಿತ್, ಪದಾಧಿಕಾರಿಗಳಾದ ರಾಮುಲು, ಮಲ್ಲೇಶ್, ಅಭಿ, ವಿನೋದ್ ಇದ್ದರು. ===
ಬಳ್ಳಾರಿ : ಇಲ್ಲಿನ ನಾಗಲಕೆರೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಾಂಸ ಎಸಗಿರುವುದು ಖಂಡಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚಾನಾಳ್ ವಿಷ್ಣುವರ್ಧನ್‌ರೆಡ್ಡಿ ಮಾತನಾಡಿ, ಕಳೆದ ಫೆ. 6ರಂದು ನಗರದ ನಾಗಲಕೆರೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸ ಹಾಕಿರುವುದು ಖಂಡಿನೀಯವಾಗಿದೆ. ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಪವಿತ್ರವಾದ ದೇವಸ್ಥಾನದಲ್ಲಿ ಇಂತಹ ಕೃತ್ಯ ಎಸಗಿರುವುದು ಹಿಂದೂಗಳ ಧಾರ್ಮಿಕ ಭಾವನೆಗೆ ಕ್ಕೆ ತರುವ ಪ್ರಯತ್ನವಾಗಿದೆ ಎಂದು ದೂರಿದರು.
ಈ ಹೀನ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.