ಸಚಿವ ಸ್ಥಾನದಿಂದ ವಜಾಗೊಳಿಸಿ

ಬಳ್ಳಾರಿಯಲ್ಲಿ ಯುವ ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳ ಧ್ವನಿ ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್,  ಪದಾಧಿಕಾರಿಗಳಾದ ಶ್ರೀಕಾಂತ್, ಜೆ.ಎಸ್.ಆಂಜನೇಯಲು, ಬೋಯಪಾಟಿ ವಿಷ್ಣುವರ್ಧನ್ , ಸಿದ್ದು ಹಳ್ಳೇಗೌಡ, ಮಹೇಂದ್ರ ಇತರರಿದ್ದರು.
ಬಳ್ಳಾರಿಯಲ್ಲಿ ಯುವ ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳ ಧ್ವನಿ ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಪದಾಧಿಕಾರಿಗಳಾದ ಶ್ರೀಕಾಂತ್, ಜೆ.ಎಸ್.ಆಂಜನೇಯಲು, ಬೋಯಪಾಟಿ ವಿಷ್ಣುವರ್ಧನ್ , ಸಿದ್ದು ಹಳ್ಳೇಗೌಡ, ಮಹೇಂದ್ರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ
  • ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ
ಬಳ್ಳಾರಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಇಲ್ಲಿನ ಗಡಿಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
‘ವಿದ್ಯಾರ್ಥಿಗಳ ಧ್ವನಿ ’ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಪ್ರತಿಭಟನೆಯೂ ನಗರದ ಮುನ್ಸಿಪಲ್ ಮೈದಾನದಿಂದ ಆರಂಭಗೊಂಡು ಗಡಿಗಿ ಚನ್ನಪ್ಪ ವೃತ್ತದವರೆಗೆ ಮೆರವಣಿಗೆ ರೂಪದಲ್ಲಿ ಸಾಗಿತು. ಪ್ರತಿಭಟನೆಯಲ್ಲಿ ನಾನಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.
ಪ್ರತಿ ವರ್ಷ ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಂಪೂರ್ಣ ವಿಫಲವಾಗಿವೆ. ಮರುಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಅನೇಕರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದರು.
ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಎನ್‌ಟಿಎ ಕಾರ್ಯವೈಖರಿಯ ಕುರಿತು ಸಮಗ್ರ ತನಿಖೆ ನಡೆಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಮಟ್ಟದ ಸಿಇಟಿ ಪರೀಕ್ಷಾ ವ್ಯವಸ್ಥೆಗೆ ಆದ್ಯತೆ ನೀಡಬೇಕು ಹಾಗೂ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದ ಸಿಇಟಿ ಪರೀಕ್ಷೆಯಲ್ಲಿ ಸಣ್ಣ ವಿಷಯಗಳಿಗೂ ಆಕ್ಷೇಪ ವ್ಯಕ್ತಪಡಿಸುವ ಬಿಜೆಪಿ ನಾಯಕರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿರುವ ಕುರಿತು ಮೌನ ವಹಿಸಿರುವುದು ಅವರ ದ್ವಂದ್ವ ನಿಲುವ ಬಯಲಿಗೆಳೆಯುತ್ತದೆ ಎಂದು ಟೀಕಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net