ಬಳ್ಳಾರಿ : ಜಿಲ್ಲೆಯ ಒಬ್ಬ ವಿಶೇಷಚೇತನರೂ ಎಸ್‌ಐಆರ್ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು. ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಅಂಗವಾಗಿ ತ್ರಿಚಕ್ರ ವಾಹನ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು.