ಕಸವನ್ನು ಬೇಕಾಬಿಟ್ಟಿ ಬಿಸಾಡದಿರಿ

ಕುರುಗೋಡಿನಲ್ಲಿ ಪುರಸಭೆಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಜಾಗೃತಿ ಜಾಥಾ ನಡೆಸಲಾಯಿತು. ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಮುಖ್ಯಶಿಕ್ಷಕಿ ಲಕ್ಷ್ಮೀ, ಪುರಸಭೆ ಆರೋಗ್ಯ ನಿರೀಕ್ಷಕ ಆದಿಕೇಶವ, ಕಂದಾಯ ಅಧಿಕಾರಿ ನಾಗರಾಜ ಇತರರಿದ್ದರು.
ಕುರುಗೋಡಿನಲ್ಲಿ ಪುರಸಭೆಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಜಾಗೃತಿ ಜಾಥಾ ನಡೆಸಲಾಯಿತು. ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಮುಖ್ಯಶಿಕ್ಷಕಿ ಲಕ್ಷ್ಮೀ, ಪುರಸಭೆ ಆರೋಗ್ಯ ನಿರೀಕ್ಷಕ ಆದಿಕೇಶವ, ಕಂದಾಯ ಅಧಿಕಾರಿ ನಾಗರಾಜ ಇತರರಿದ್ದರು.
Published on
ಕುರುಗೋಡು: ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳ ತಡೆಗೆ ನಮ್ಮ ಸುತ್ತಲಿನ ವಾತಾವರಣ ಸ್ವಚ್ಛತೆ ಕಾಪಾಡುವುದು ಅಗತ್ಯ ಎಂದು ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಹೇಳಿದರು.
ಪಟ್ಟಣದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭೆಯಿಂದ ಗುರುವಾರ ಹಮ್ಮಿಕೊಂಡಿದ್ದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮನೆಯಲ್ಲಿ ನಿತ್ಯ ಉತ್ಪತ್ತಿಯಾಗುವ ಕಸವನ್ನು ಬೇಕಾಬಿಟ್ಟಿ ಬಿಸಾಡದೆ, ಹಸಿಕಸ ಮತ್ತು ಒಣಕಸ ಬೇರ್ಪಡಿಸಿ ಮನೆಮುಂದೆ ಬರುವ ಪುರಸಭೆ ಕಸ ವಿಲೇವಾರಿ ವಾಹನದಲ್ಲಿ ಹಾಕಬೇಕು ಎಂದು ಕೋರಿದರು.
ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಇಂಜಿನಿಯರ್‌ಗಳಾದ ಮೇಘನಾ, ರಾಜಶೇಖರ್, ಶಿಕ್ಷಕರಾದ ಗುರುಮೂರ್ತಿ, ಕಲ್ಲುಕಂಬ ಪ್ರಭಾಕರ ರೆಡ್ಡಿ, ಕಂದಾಯ ನಿರೀಕ್ಷಕ ರಾಜೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net