ಆಂಧ್ರದ ಕರ್ನೂಲ್‌ನಿಂದ ಆಗಮಿಸಿದ್ದ ಕಾರು, ದುರ್ಗಮ್ಮ ಗುಡಿ ವೃತ್ತದಿಂದ ಸಂಚರಿಸುವ ವೇಳೆ ಅಲ್ಲಂ ಸುಮಂಗಳಮ್ಮ ಕಾಲೇಜು ಬಳಿ ರಸ್ತೆಯ ಹಂಪ್ಸ್ ಗಮನಿಸದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆಬದಿಯ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಓರ್ವ ಸವಾರ ಸ್ಥಳದಿಂದ ಪರಾರಿಯಾಗಿದ್ದಾರೆ. ಮತ್ತೊಬ್ಬ ಲೋಕೇಶ್ ಎಂಬ ಸವಾರ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಕ್ರೋಶಗೊಂಡ ಸ್ಥಳೀಯರು ಆತನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.