ಎಐನಿಂದ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನೆ

ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಒಂದು ರಾಷ್ಟ್ರೀಯ ಕಾರ್ಯಾಗಾರವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ರಾಷ್ಟ್ರೀಯ ಕಾರ್ಯಾಗಾರದ ಸಂಚಾಲಕ ಡಾ. ಸುಷ್ಮಾ ಎನ್. ಜೋಗನ್, ಸಹ ಸಂಚಾಲಕ ಡಾ. ಗೋಪಾಲ್, ಕುಲಸಚಿವ ಪ್ರೊ.ಎನ್.ಎಂ. ಸಾಲಿ, ಪ್ರೊ.ಡಾ.ಕೆ. ತಿಯಾಗು, ಪ್ರೊ.ಡಾ.ಪ್ರಕಾಶ್ ಬಡಿಗೇರ್ ಇತರರಿದ್ದರು.
ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಒಂದು ರಾಷ್ಟ್ರೀಯ ಕಾರ್ಯಾಗಾರವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ರಾಷ್ಟ್ರೀಯ ಕಾರ್ಯಾಗಾರದ ಸಂಚಾಲಕ ಡಾ. ಸುಷ್ಮಾ ಎನ್. ಜೋಗನ್, ಸಹ ಸಂಚಾಲಕ ಡಾ. ಗೋಪಾಲ್, ಕುಲಸಚಿವ ಪ್ರೊ.ಎನ್.ಎಂ. ಸಾಲಿ, ಪ್ರೊ.ಡಾ.ಕೆ. ತಿಯಾಗು, ಪ್ರೊ.ಡಾ.ಪ್ರಕಾಶ್ ಬಡಿಗೇರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೋಧನೆ
ಬಳ್ಳಾರಿ : ಪ್ರಸ್ತುತ ತಂತ್ರಜ್ಞಾನದ ಅತಿಯಾದ ಬಳಕೆ ನಮ್ಮನ್ನು ಆವರಿಸಿಕೊಂಡಿವೆ. ಇದರಿಂದಾಗಿ ನಮ್ಮಲ್ಲಿರುವಂತ ವೈಚಾರಿಕ ಸ್ವಂತಿಕೆ ಕಳೆದುಕೊಳ್ಳುತ್ತಿದ್ದೇವೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ.ಎಂ.ಸಿ.ಎರ‌್ರಿಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ವಿಎಸ್‌ಕೆ ವಿವಿ ಸಭಾಂಗಣದಲ್ಲಿ ಶಿಕ್ಷಣ ಅಧ್ಯಯನ ವಿಭಾಗದಿಂದ ಬುಧವಾರ ಆಯೋಜಿಸಿದ್ದ ಒಂದು ದಿನದ ಮುಂದಿನ ಪೀಳಿಗೆಯ ಉದಯೋನ್ಮುಖ ಸಂಶೋಧನಾ ಕೌಶಲಗಳ ತಂತ್ರಜ್ಞಾನದೊಂದಿಗೆ ಎಐ ಡೇಟಾ ವಿಶ್ಲೇಷಣೆ ಕುರಿತಾದ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದರು. ಆದರೆ ಎಐ ನಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿ ಬೋಧನೆ ಸಾಧ್ಯವಾಗಿದೆ. ತಾಂತ್ರಿಕ ಕೌಶಲಗಳಿಂದ ದತ್ತಾಂಶಗಳನ್ನು ಹೆಚ್ಚು ಕಲೆಹಾಕುವ ಮೂಲಕ ಸಂಶೋಧನೆಯಲ್ಲಿ ಒಳ್ಳೆಯ ಫಲಿತಾಂಶ ಪಡೆಯಬಹುದು. ಸಮೀಕ್ಷೆ, ಸಂಶೋಧನೆಯ ಅಂತರಗಳ ವಿಸ್ತರಣೆಯ ಮೂಲಕ ಸಾಮಾಜಿಕ ಸಂಬಂಧಗಳನ್ನು ಸುಧಾರಿಸಲು ತಂತ್ರಜ್ಞಾನ ಆಧಾರಿತ ಅಧ್ಯಯನಗಳಿಂದ ಸಾಧ್ಯವಾಗುತ್ತದೆ ಎಂದರು.
ಎಐ ಮತ್ತು ಮಷಿನ್ ಲರ್ನಿಂಗ್‌ನಂತಹ ತಂತ್ರಜ್ಞಾನಗಳನ್ನು ಎಲ್ಲದಕ್ಕೂ ಬಳಕೆ ಮಾಡದೆ ಉತ್ತಮ ಸಾಮಾಜಿಕ ಸಂಶೋಧನೆಗಳು ಹೊರತರಲು ಪ್ರಯೋಗಾತ್ಮಕವಾಗಿ ಬಳಸಬೇಕು ಎಂದರು.
ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರು ಶಿಕ್ಷಕನಿಗೆ ಸಮನಾಗಿ ಯಾವುದಿಲ್ಲ. ತಂತ್ರಜ್ಞಾನಗಳ ಬಳಕೆಯಿಂದಾಗಿ ತರಗತಿಗಳು ಇಂದು ಆಧುನಿಕ ಸ್ವರೂಪ ಪಡೆದುಕೊಂಡಿವೆ. ತಂತ್ರಜ್ಞಾನದ ಅತಿಯಾದ ಬಳಕೆಯಿಂದಾಗಿ ಸಂಬಂಧಗಳಲ್ಲಿ ಸಾಮರಸ್ಯಗಳ ಕೊರತೆ ಉಂಟಾಗುತ್ತಿದೆ ಎಂದರು. ಕಾರ್ಯಾಗಾರದಲ್ಲಿ ಬಿ.ಇಡಿ ಕಾಲೇಜುಗಳ ಅಧ್ಯಾಪಕರು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net