ಸಾಮಾಜಿಕ ಅಸಮಾನತೆ ನಿವಾರಣೆಗೆ ಶ್ರಮ

ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
Published on
ಕುರುಗೋಡು: ಸರಳ ಭಾಷೆ ಮೂಲಕ ಸರ್ವರಿಗೂ ಅರ್ಥವಾಗುವಂತೆ ವಚನ ರಚಿಸಿದ ದೇವರ ದಾಸಿಮಯ್ಯ ಅವರು ಸ್ವಸ್ಥ ಸಮಾಜ ನಿರ್ಮಾಣ ಮಾಡಿ ಸನ್ಮಾರ್ಗದೆಡೆಗೆ ಜನರನ್ನು ನಡೆಸಿದರು ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರ ದಾಸಿಮಯ್ಯ ವಚನಗಳ ಮೂಲಕ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದರು. ಅವರ 176 ವಚನಗಳು ಇದುವರೆಗೂ ಲಭ್ಯವಾಗಿವೆ. ದಾಸಿಮಯ್ಯ ಅವರ ವಚನಗಳ ಸಾರವನ್ನು ಮಕ್ಕಳು, ಯುವಜನತೆಗೆ ತಿಳಿಸಿ ಸುಸಂಸ್ಕೃತರನ್ನಾಗಿ ಮಾಡಬೇಕು ಎಂದರು.
ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ ಮಾತನಾಡಿ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರಿನಲ್ಲಿ ಜನಿಸಿದ್ದ ದೇವರ ದಾಸಿಮಯ್ಯ 10ನೇ ಶತಮಾನದಲ್ಲಿ ಸರಳವಾಗಿ ವಚನಗಳನ್ನು ರಚಿಸಿ ಜನಸಾಮಾನ್ಯರನ್ನು ತಿದ್ದುವ ಕೆಲಸ ಮಾಡಿದರು. ದಾಸಿಮಯ್ಯ ಅವರ ವಚನಗಳು ಎಂದಿಗೂ ಪ್ರಸ್ತುತ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net