ಭಾರಿ ಗಾಳಿಯ ರಭಸಕ್ಕೆ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ಉರುಳಿದ್ದು, ತಂತಿಗಳು ರಸ್ತೆಯ ಮೇಲೆ ಬಿದ್ದಿವೆ. ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ 35ನೇ ವಾರ್ಡ್ ಸದಸ್ಯ ಮಿಂಚು ಶ್ರೀನಿವಾಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯುತ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಉರುಳಿದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ವಿದ್ಯುತ್ ಕಂಬಳಗಳನ್ನು ಅಳವಡಿಸಿ ಎಂಬುದಾಗಿ ಅಧಿಕಾರಿಗಳಿಗೆ ಶ್ರೀನಿವಾಸಲು ಸೂಚಿಸಿದರು.