ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ

ಬಳ್ಳಾರಿಯ ಸಂತಜಾನ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು  ಜಿಲ್ಲಾಧ್ಯಕ್ಷ ನಿಂಗಪ್ಪ ಉದ್ಘಾಟಿಸಿದರು. ಬಿಇಒ ಕಸ್ತೂರಿ, ಫಾದರ್ ಬಿ.ಫ್ರಾನ್ಸಿಸ್, ಮುಖ್ಯಗುರು ಶಾಂತುಶೀಲನ್, ಕ್ಷೇತ್ರ ಸಮನ್ವಯಾಧಿಕಾರಿ ವಿರೇಶಪ್ಪ, ಜಿಲ್ಲಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಸತ್ಯನಾರಾಯಣ ಇದ್ದರು.
ಬಳ್ಳಾರಿಯ ಸಂತಜಾನ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ ನಿಂಗಪ್ಪ ಉದ್ಘಾಟಿಸಿದರು. ಬಿಇಒ ಕಸ್ತೂರಿ, ಫಾದರ್ ಬಿ.ಫ್ರಾನ್ಸಿಸ್, ಮುಖ್ಯಗುರು ಶಾಂತುಶೀಲನ್, ಕ್ಷೇತ್ರ ಸಮನ್ವಯಾಧಿಕಾರಿ ವಿರೇಶಪ್ಪ, ಜಿಲ್ಲಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಸತ್ಯನಾರಾಯಣ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಡಳಿತ
ಬಳ್ಳಾರಿ : ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವ ಕೆಲಸ ಶಿಕ್ಷಕರು ಮಾಡಬೇಕು ಎಂದು ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ ಹೇಳಿದರು.
ನಗರದ ಕೋಟೆ ಪ್ರದೇಶದ ಸಂತಜಾನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಪ್ರಸ್ತಕ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಾಠದ ಜತೆಗೆ ಕಲೆ ಮತ್ತು ಸಂಸ್ಕೃತಿ ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ನಿಯೋಜಿತರಾದ ತೀರ್ಪುಗಾರರರು ಅತ್ಯಂತ ನಿಷ್ಪಕ್ಷಪಾತವಾಗಿ ಪ್ರತಿಭಾವಂತರನ್ನು ಆಯ್ಕೆ ಮಾಡಬೇಕು. ಆಯ್ಕೆಯಾದ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪತ್ರ ವ್ಯವಹಾರಾಧಿಕಾರಿ ಫಾದರ್ ಬಿ.ಫ್ರಾನ್ಸಿಸ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು ಎಂದರು.
ಬಳ್ಳಾರಿ ಪೂರ್ವ ವಲಯದ ಬಿಇಒ ಕಸ್ತೂರಿ ಮಾತನಾಡಿ, ಮಗುವಿನಲ್ಲಿನ ಕಲೆ ಹಾಗೂ ಪತ್ರಿಭೆ ಬಾಲ್ಯದಲ್ಲಿಯೇ ಬಿಂಬಿತಗೊಳ್ಳಲಿದೆ. ಪ್ರದರ್ಶಿಸಲು ಉತ್ತಮ ವೇದಿಕೆ ಮತ್ತು ಗುರುತಿಸುವ ಪಾಲಕರು, ಶಿಕ್ಷಕರು ಮುಖ್ಯವಾಗುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದಲ್ಲಿ ಶಾಲಾ ಮತ್ತು ಪ್ರೌಢ ಮಟ್ಟದ ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ನಾನಾ ರೀತಿಯ ಸ್ಪರ್ಧೆಗಳ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಗಾಂಧಿ ತತ್ವ ಆಧಾರಿತ ಬಾಲಕಿಯರ ವಸತಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಎಚ್.ವಿ.ಗಾಯಿತ್ರಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net