ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೋಶದಿಂದ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ರಾಷ್ಟೀಯ ಸೇವಾ ಯೋಜನೆಯ 2023-24ನೇ ಸಾಲಿನ ಉತ್ತಮ ಎನ್‌ಎಸ್‌ಎಸ್ ಘಟಕ ಕಾರ್ಯಕ್ರಮ ಅಧಿಕಾರಿಗಳು ಮತ್ತು ಸ್ವಯಂ ಸೇವಕ, ಸೇವಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿ ವ್ಯಾಪ್ತಿಗೆ ಒಳಪಡುವ ರಾ.ಸೇ.ಯೋ. ಘಟಕಗಳನ್ನು ಹೊಂದಿರುವ ಪದವಿ ಮಹಾವಿದ್ಯಾಲಯಗಳ ಪ್ರಾಂಶುಪಾಲರುಗಳಿಗೆ ಮತ್ತು ಘಟಕಗಳ ಕಾರ್ಯಕ್ರಮಧಿಕಾರಿಗಳಿಗೆ ಒಂದು ದಿನದ ನಾಯಕತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ನಾಯಕತ್ವ ಗುಣ ಎಲ್ಲರಲ್ಲೂ ಕಾಣಲು ಸಾಧ್ಯವಿಲ್ಲ. ನಾಯಕತ್ವವನ್ನು ವಹಿಸಿಕೊಂಡಾಗ ನಾಯಕತ್ವದ ಪ್ರಜ್ಞೆ ಬೆಳೆಯುತ್ತದೆ. ಎಲ್ಲವನ್ನು ಮೆಟ್ಟಿ ನಿಲ್ಲುವವನೆ ನಿಜವಾದ ನಾಯಕ. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ನಾಯಕತ್ವ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವ ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯು ಹಗಲಿರುಳು ಶ್ರಮಿಸುತ್ತಿದೆ ಎಂದರು.