ಕುಡಿವ ನೀರಿನ ಕೊರತೆಯಾಗದಂತೆ ನಿಗಾವಹಿಸಿ

ಕೂಡ್ಲಿಗಿಯಲ್ಲಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು. ತಾಪಂ ಇಒ ನರಸಪ್ಪ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಕೆ.ಜಿ.ಆಂಜನೇಯ ಇತರರಿದ್ದರು.
ಕೂಡ್ಲಿಗಿಯಲ್ಲಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು. ತಾಪಂ ಇಒ ನರಸಪ್ಪ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಕೆ.ಜಿ.ಆಂಜನೇಯ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಸೂಚನೆ
  • ಕೂಡ್ಲಿಗಿ ಟಾಸ್ಕ್‌ಫೋರ್ಸ್ ಸಭೆ
ಕೂಡ್ಲಿಗಿ: ಬಿಸಿಲು ತೀವ್ರವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್ಲಿಯೂ ಕುಡಿವ ನೀರಿನ ತೊಂದರೆಯಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಸೂಚಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಪ್ರತಿ ಗ್ರಾಪಂಗೂ ಒಬ್ಬ ತಾಲೂಕು ಮಟ್ಟದ ಅಧಿಕಾರಿಯನ್ನು ಆಡಳಿತಾಧಿಕಾರಿ ಎಂದು ಜವಾಬ್ದಾರಿ ನೀಡಲಾಗಿದೆ. ಎಲ್ಲಾದರೂ ನೀರಿನ ತೊಂದರೆಯ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿ ಜವಾಬ್ದಾರಿ ನಿಭಾಯಿಸಬೇಕು ಎಂದು ತಾಕೀತು ಮಾಡಿದರು.
ಈವರೆಗೂ ಎಲ್ಲಿಯೂ ನೀರಿನ ಸಮಸ್ಯೆ ಕಂಡುಬಂದಿಲ್ಲ, ಕೆಲವು ಕಡೆ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಪರ್ಯಾಯವಾಗಿ ಬೇರೆ ಕೊಳವೆ ಬಾವಿಯಿಂದ ನೀರು ಪೂರೈಸಲಾಗಿದೆ. ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಬಾರದಂತೆ ಎಚ್ಚರ ವಹಿಸಿದೆ. ಹಗರಿಬೊಮ್ಮನಹಳ್ಳಿ ಜಾಕ್‌ವೆಲ್ ಬಳಿ ವಿದ್ಯುತ್ ಸಮಸ್ಯೆಯಿಂದ ನೀರಿನ ಕೊರತೆ ಉಂಟಾಗಿತ್ತು. ಅದನ್ನು ಸರಿಪಡಿಸಲಾಗಿದ್ದು, ಜಾನುವಾರುಗಳಿಗೆ ಮೇವಿನ ತೊಂದರೆ ಇಲ್ಲ. ಎರಡು ತಿಂಗಳಿಗೂ ಹೆಚ್ಚು ಆಗುವಷ್ಟು ಮೇವು ದಾಸ್ತಾನು ರೈತರಲ್ಲಿ ಇದೆ ಎಂದು ಮಾಹಿತಿ ನೀಡಿದರು.
ತಾಪಂ ಇಒ ಕೆ.ನರಸಪ್ಪ ಮಾತನಾಡಿ, ಯಾವ ಗ್ರಾಮದಲ್ಲೂ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು. 14 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದು ಎಂದು ಅಂದಾಜು ಮಾಡಲಾಗಿದೆ. ಸಮಸ್ಯೆ ಕಂಡುಬಂದರೆ ಸಾರ್ವಜನಿಕರು ಸಹಾಯವಾಣಿಗೆ ದೂರು ನೀಡಬಹುದು. ಮುಂಜಾಗ್ರತಾ ಕ್ರಮವಾಗಿ ಹಳ್ಳಿಗಳಲ್ಲಿ ಒಂದು ಬಾರಿ ಮಾತ್ರ ನೀರು ಪೂರೈಸಲು ತಿಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮೀಣ ನೀರು ಸರಬರಾಜು ವಿಭಾಗದ ಎಇಇ ಪ್ರಸನ್ನ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಕೆ.ಜಿ.ಆಂಜನೇಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತೇಜವರ್ಧನ್, ಸಿಡಿಪಿಒ ಮಾಲುಂಬಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕುಬೇರಾಚಾರಿ, ತಾಲೂಕು ಮಟ್ಟದ ಇತರ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net